BELAGAVI

ಆರೋಗ್ಯ ಕೇಂದ್ರವೋ, ಕಳಪೆ ಕಾಮಗಾರಿಯ ಕೇಂದ್ರವೋ?

Share

ಬೆಳಗಾವಿ: ಜಿಲ್ಲೆಯ ಕಿತ್ತೂರು ಕ್ಷೇತ್ರದ ನಿಚ್ಚಣಕಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಈ ಆರೋಗ್ಯ ಕೇಂದ್ರದ ಕಾಮಗಾರಿಯಲ್ಲಿ ತಳಪಾಯ, ಪ್ಲಿಂತ್ ಬೀಮ್ (Plinth Beam) ಹಾಗೂ ನೆಲದಲ್ಲಿ ಗಂಭೀರ ಬಿರುಕುಗಳು ಕಾಣಿಸಿಕೊಂಡಿವೆ.ಕಟ್ಟಡದ ಸುರಕ್ಷತೆ ಮತ್ತು ಕಾಮಗಾರಿಯ ಗುಣಮಟ್ಟದ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಈ ಹಿಂದೆ ಕೂಡ ಸಾರ್ವಜನಿಕರು ಕಾಮಗಾರಿಗೆ ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೂ ಕಾಮಗಾರಿ ಮುಂದುವರಿದಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

 

ಇನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೂಚನೆ ನೀಡಿದರೂ ಟೆಂಡರ್ ಮಾಲೀಕರು ಕ್ಯಾರೆ ಎನ್ನದೆ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಟೆಂಡರ್ ಮಾಲೀಕರು ಎಚ್ಚೆತ್ತುಕೊಂಡು ಕಾಮಗಾರಿಯ ಗುಣಮಟ್ಟ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.ಒಂದು ವೇಳೆ ಸಮಸ್ಯೆ ಬಗೆಹರಿಸದಿದ್ದರೆ ಕಾನೂನುಬದ್ಧವಾಗಿ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.ಸರ್ಕಾರಿ ಆರೋಗ್ಯ ಕೇಂದ್ರದ ಕಾಮಗಾರಿಯಲ್ಲೇ ಇಂತಹ ಲೋಪಗಳ ಆರೋಪ ಕೇಳಿಬಂದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಕಾಮಗಾರಿ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Tags:

error: Content is protected !!