Vijaypura

ವಿಜಯಪುರ ಜಿಲ್ಲೆಯ ರೈತರನ್ನು ತಡೆದ ಪೊಲೀಸರು – ಹತ್ತರಗಾ ಟೋಲ್‌ನತ್ತ ತೆರಳುತ್ತಿದ್ದ ರೈತರಿಗೆ ಅಡ್ಡಿ

Share

ವಿಜಯಪುರ ಜಿಲ್ಲೆಯ ರೈತ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ರೈತರು ಹತ್ತರಗಾ ಟೋಲ್ ನಾಕಾ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು ವಾಹನಗಳನ್ನು ತಡೆದು ಮುಂದಕ್ಕೆ ಹೋಗದಂತೆ ನಿರ್ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಚಗಾಂವ ಕ್ರಾಸ್ ಬಳಿ ನಡೆದಿದೆ.‌

ಈ ವೇಳೆ ರೈತರ ವಾಹನಗಳನ್ನು ಪೊಲೀಸರು ತಡೆದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ರೈತರು ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ರೈತರ ವಾಹನಗಳನ್ನು ತಡೆದ ಪೊಲೀಸರ ಕ್ರಮಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದು ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಎಂದು ಆರೋಪಿಸಿದರು.
ಇದೇ ವೇಳೆ ರೈತ ಮುಖಂಡರಾದ ಚೂನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
ರೈತರ ಹೋರಾಟಕ್ಕೆ ಅಡ್ಡಿಪಡಿಸುವ ಬದಲು ಅವರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Tags:

error: Content is protected !!