Dharwad

ಅಕ್ಕ ಪಡೆ ಯೋಜನೆಯಡಿ ಪೋಲಿಸ್ ತರಬೇತಿ ಶಾಲೆಯಲ್ಲಿ ಜರುಗಿದ ಮಹಿಳಾ ಗೃಹರಕ್ಷಕಿಯರಿಗೆ ತರಬೇತಿ ಕಾರ್ಯಕ್ರಮ

Share

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ, ಪೋಲಿಸ್ ಇಲಾಖೆ ಹಾಗೂ ಗೃಹ ರಕ್ಷಕ ದಳ ಧಾರವಾಡ ಇವರ ಸಹಯೋಗದಲ್ಲಿ ಅಕ್ಕ ಪಡೆ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಗೃಹರಕ್ಷಕಿಯರಿಗೆ ತೀವ್ರ ಸ್ವ-ರಕ್ಷಣೆ ತರಬೇತಿ ಕಾರ್ಯಕ್ರಮವನ್ನು ಪೋಲಿಸ್ ತರಬೇತಿ ಶಾಲೆಯಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಗುಂಜನ ಆರ್ಯ ಅವರು ಉದ್ಘಾಟಸಿ, ಮಾತನಾಡಿದರು.

ಮಹಿಳೆ ಮತ್ತು ಮಕ್ಕಳಿಗೆ ಕಾನೂನು ಅರಿವು, ಜಾಗೃತಿ ಶಿಕ್ಷಣ ನೀಡುವುದರ ಜೊತೆಗೆ ಸಂಕಷ್ಟದಲ್ಲಿರುವ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆ ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ/ನೆರವು ನೀಡುವುದು ಹಾಗೂ “ಆತ್ಮರಕ್ಷಣೆ ಹಾಗೂ ಸಾಮಥ್ರ್ಯ ಅಭಿವೃದ್ಧಿಪಡಿಸುವುದು ನಮ್ಮ ಅಕ್ಕಪಡೆಯ ಉದ್ದೇಶವಾಗಿದೆ ಎಂದು ವಿವರವಾಗಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಮಾತನಾಡಿ, ಮಹಿಳೆ ಮತ್ತು ಮಕ್ಕಳ ಸುರಕ್ಷತೆಯ ಕುರಿತು ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮತ್ತು ಜಿಲ್ಲೆಯಲ್ಲಿ ಅಕ್ಕ ಪಡೆ ಚೆನ್ನಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಅಲ್ಲಪ್ಪ ಬಡಿಗೇರ ಅವರು ಮಾತನಾಡಿ, ಮಹಿಳೆ ಮತ್ತು ಮಕ್ಕಳಿಗೆ ಕಾನೂನು ಅರಿವು, ಜಾಗೃತಿ ಶಿಕ್ಷಣ ನೀಡುವುದರ ಜೊತೆಗೆ ಮಹಿಳೆಯರ ಮತ್ತು ಮಕ್ಕಳ ಆತ್ಮರಕ್ಷಣೆ ಹಾಗೂ ಸಾಮಥ್ರ್ಯದ ಕುರಿತು ವಿವರವಾಗಿ ತಿಳಿಸಿದರು.
ಅಕ್ಕಪಡೆ ರಾಜ್ಯ ಸಲಹೆಗಾರರಾದ ಡಾ. ಶೈನಿ ರಾಜೇಂದ್ರಕುಮಾರ “ಅಕ್ಕಪಡೆ” ಯೋಜನೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮೀ ಪಾಟೀಲ ಅವರು ಸ್ವಾಗತಿಸಿದರು. ಹಿರಿಯ ಮೇಲ್ವಿಚಾರಕಿ ಸುನೀತಾ ನಾಡಗೇರ ನಿರೂಪಿಸಿದರು. ಜಿಲ್ಲಾ ಮಿಷನ್ ಶಕ್ತಿ ಸಂಯೋಜಕ ಸತೀಶ ಭಟ್ ವಂದಿಸಿದರು.

ಕಾರ್ಯಕ್ರಮದಲ್ಲಿ ಕೆ,ಎಸ್,ಪಿ,ಎಸ್ ಪ್ರಾಂಶುಪಾಲರು ಹಾಗೂ ಪೋಲಿಸ್ ತರಬೇತಿ ಶಾಲೆಯ ಪೋಲಿಸ್ ಅಧೀಕ್ಷಕ ಎಂ.ಎಂ.ಯಾದವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ, ಜಿಲ್ಲಾ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಯ ಗೃಹ ರಕ್ಷಕ ಸಿಬ್ಬಂದಿಯವರು ಹಾಜರಿದ್ದರು.

Tags:

error: Content is protected !!