ರೈತ ಮುಖಂಡ ಚುನ್ನಪ್ಪ ಪೂಜಾರಿ ಅವರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿ ಬೃಹತ್ ಪ್ರತಿಭಟನೆ ನಡೆಸಿದರು.: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಯುಕೆಪಿ ಸಮೀಪ ಚುನ್ನಪ್ಪ ಪೂಜಾರಿ ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ರೈತರು ವಿಜಯಪುರ-ಬಾಗಲಕೋಟೆ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಸ್ಥಳಕ್ಕೆ ಆಗಮಿಸಿದ ಸಿಪಿಐ ಹಾಗೂ ಪಿಎಸ್ಐ ಸೇರಿದಂತೆ ಪೊಲೀಸ್ ಸಿಬ್ಬಂದಿ ಪ್ರತಿಭಟನಾನಿರತ ರೈತರನ್ನು ತೆರವುಗೊಳಿಸಲು ಪ್ರಯತ್ನಿಸಿದರು. ಆದರೆ, ರೈತರು ಪೊಲೀಸರ ಮನವಿಗೆ ಜಗ್ಗದೆ ತಮ್ಮ ಹೋರಾಟವನ್ನು ಮುಂದುವರಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಮಹಾಂತೇಶ ಗಿಡ್ಡಪ್ಪಗೋಳ ಮಾತನಾಡಿ, ಚುನ್ನಪ್ಪ ಪೂಜಾರಿ ಅವರನ್ನು ಬಿಡುಗಡೆ ಮಾಡುವವರೆಗೂ ನಿರಂತರ ಹೋರಾಟ ಮುಂದುವರಿ ಸಲಾಗುವುದು ಎಂದು ಎಚ್ಚರಿಕೆ ನೀಡಿದರು.
