ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ನಿವೃತ್ತ ಮುಖ್ಯಾಧ್ಯಾಪಕ ಎ.ಎ.ಸನದಿ ಅವರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಬೆಳಗಾವಿಯ ಭರತೇಶ ಪ್ರೌಢಶಾಲೆಯ ನಿವೃತ್ತ ಮುಖ್ಯಾಧ್ಯಾಪಕ ಹಾಗೂ ಶಿಂದೊಳ್ಳಿ ಗ್ರಾಮದವರಾದ ಎ.ಎ.ಸನದಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಒಟ್ಟು 20 ಸಾಹಿತ್ಯಿಕ ಕೃತಿಗಳನ್ನು ಪ್ರಕಟಿಸಿರುವ ಇವರು ಈಗಾಗಲೇ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದು, ಈ ಹಿಂದೆ ಅತ್ಯುತ್ತಮ ಶಿಕ್ಷಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನೂ ಪಡೆದು ನಾಡಿಗೆ ಮಾದರಿಯಾಗಿದ್ದಾರೆ.
