ರಾಜಧಾನಿಯ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ ಇಂದು ವಿಶೇಷ ಸಂವಾದಕ್ಕೆ ಸಾಕ್ಷಿಯಾಯಿತು. ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿಯ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ನೇರ ಸಂವಾದ ನಡೆಸಿ, ಅವರ ಯಶಸ್ಸಿನ ಕಥೆಗಳನ್ನು ಆಲಿಸಿದರು.


ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಸೌಹಾರ್ದಯುತ ಸಂವಾದ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಸ್ವಾವಲಂಬಿ ಬದುಕು ಕಟ್ಟಿಕೊಂಡ ಮಹಿಳೆಯರು ತಮ್ಮ ಅನುಭವಗಳನ್ನು ಹಂಚಿಕೊಂಡರು. ತಾವು ಸ್ವತಃ ತಯಾರಿಸಿದ ವಿವಿಧ ಉತ್ಪನ್ನಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪ್ರೀತಿಯ ಉಡುಗೊರೆಯಾಗಿ ನೀಡಿ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಹಾಗೂ ಇಲಾಖೆ ನಿರ್ದೇಶಕ ಡಾ. ಮಹೇಶ್ ಬಾಬು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


