ಜ್ಯೂವೆಲರಿ ಅಂಗಡಿಯೊಂದಕ್ಕೆ ನುಗ್ಗಿದ ಖದೀಮರು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕೆಂಪು ಬಣ್ಣದ ಕಾರಿನಲ್ಲಿ ಬಂದ ಮೂವರ ಖದೀಮರ ತಂಡ ಗ್ಯಾಸ್ ಕಟರ್ ಬಳಸಿ ಬೀಗ ಮುರಿದು ಈ ಕೃತ್ಯ ಎಸಗಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ ನವನಗರದ ಸೆಕ್ಟರ್ ನಂಬರ್ 26ರಲ್ಲಿರುವ ‘ಓಂ ಜ್ಯೂವೆಲರ್ಸ್’ ಅಂಗಡಿಯಲ್ಲಿ ತಡರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ರೆಡ್ ಕಲರ್ ಕಾರಿನಲ್ಲಿ ಆಗಮಿಸಿದ ಮೂವರು ಕತಾರ್ ಖದೀಮರು, ಗ್ಯಾಸ್ ಕಟರ್ ಬಳಸಿ ಅಂಗಡಿಯ ಶಟರ್ ಬೀಗವನ್ನು ಕಟ್ ಮಾಡಿ ಒಳನುಗ್ಗಿದ್ದಾರೆ. ಬಳಿಕ ಪ್ರದರ್ಶನದಲ್ಲಿದ್ದ ಹಾಗೂ ಲಾಕರ್ನಲ್ಲಿದ್ದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಗೋಣಿ ಚೀಲಕ್ಕೆ ತುಂಬಿಕೊಂಡು ಕ್ಷಣಾರ್ಧದಲ್ಲಿ ಕಾಲ್ಕಿತ್ತಿದ್ದಾರೆ. ಈ ಇಡೀ ಕಳ್ಳತನದ ರೋಚಕ ದೃಶ್ಯಗಳು ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ನವನಗರ ಪೊಲೀಸ್ ಅಭಿಯಂತರರು ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಖದೀಮರಿಗಾಗಿ ಜಾಲ ಬೀಸಿದ್ದಾರೆ.

