Khanapur

ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂಜಯ್ ಕುಬಲ್ ಜನ್ಮದಿನದ ಸಂಭ್ರಮ

Share

ಖಾನಾಪುರ ತಾಲ್ಲೂಕಿನಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ನಿಷ್ಠಾವಂತ ನಾಯಕ ಹಾಗೂ ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂಜಯ್ ಕುಬಲ್ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಅತ್ಯುತ್ಸಾಹದಿಂದ ಆಚರಿಸಿದ್ದಾರೆ. ದಶಕಗಳ ಕಾಲ ಪಕ್ಷಕ್ಕಾಗಿ ಅವರು ಸಲ್ಲಿಸಿದ ಸೇವೆ ಮತ್ತು ಹೋರಾಟವನ್ನು ಈ ಸಂದರ್ಭದಲ್ಲಿ ನೆರೆದಿದ್ದ ಮುಖಂಡರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಖಾನಾಪುರ ತಾಲೂಕಿನಲ್ಲಿ ಬಿಜೆಪಿ ಪಕ್ಷದ ಬೇರುಗಳನ್ನು ಗಟ್ಟಿಗೊಳಿಸುವಲ್ಲಿ ಶ್ರಮಿಸಿರುವ ಪ್ರಮುಖ ನಾಯಕ ಸಂಜಯ್ ಕುಬಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವು ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಈ ವೇಳೆ ಮಾತನಾಡಿದ ಶಾಸಕ ಪ್ರಮೋದ್ ಕೊಚೇರಿ, ಸಂಜಯ್ ಕುಬಲ್ ಅವರು ವಿದ್ಯಾರ್ಥಿ ಹರೆಯದಿಂದಲೂ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದು, ಅವರ ಪರಿಶ್ರಮದಿಂದಲೇ ಇಂದು ತಾಲೂಕಿನಲ್ಲಿ ಬಿಜೆಪಿ ಬೆಳೆದು ನಿಂತಿದೆ ಎಂದು ಬಣ್ಣಿಸಿದರು.ದೂರದ ಅರಣ್ಯ ಹಾಗೂ ದುರ್ಗಮ ಗ್ರಾಮಗಳಿಗೂ ತೆರಳಿ ಪಕ್ಷದ ವಿಚಾರಗಳನ್ನು ಜನಸಾಮಾನ್ಯರಿಗೆ ತಲುಪಿಸಿದ ಸಂಜಯ್ ಕುಬಲ್, ಪಕ್ಷದ ಕಷ್ಟದ ಕಾಲದಲ್ಲೂ ಕಾರ್ಯಕರ್ತರನ್ನು ಒಗ್ಗೂಡಿಸಿ ಸಂಘಟನೆ ಬಲಪಡಿಸಿದ್ದಾರೆ ಎಂದು ಮುಖಂಡರು ಕೊಂಡಾಡಿದರು.

ವೇದಿಕೆಯಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಮೋದ್ ಕೊಚೇರಿ, ಮಾಜಿ ಜಿ.ಪಂ. ಸದಸ್ಯ ಬಾಬುರಾವ್ ದೇಸಾಯಿ, ಮಹಿಳಾ ಮುಖಂಡೆ ಧನಶ್ರೀ ಸರದೇಸಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags:

error: Content is protected !!