ದೀಪಾವಳಿ ಹಬ್ಬದ ಸಂಭ್ರಮ ನಗರದಲ್ಲಿ ಕಳೆಗಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ‘ವೋಕಲ್ ಫಾರ್ ಲೋಕಲ್’ ಅಭಿಯಾನಕ್ಕೆ ವಿಜಯಪುರದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸಾಥ್ ನೀಡಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿರುವ ಸ್ಥಳೀಯ ವ್ಯಾಪಾರಿಗಳ ಮಳಿಗೆಗಳಿಗೆ ಭೇಟಿ ನೀಡಿದ ಅವರು, ಮಣ್ಣಿನ ಹಣತೆಗಳು, ದೀಪಗಳು ಹಾಗೂ ಆಕಾಶ ಬುಟ್ಟಿಗಳನ್ನು ಖರೀದಿಸುವ ಮೂಲಕ ಸ್ಥಳೀಯ ವ್ಯಾಪಾರಿಗಳಿಗೆ ಪ್ರೋತ್ಸಾಹ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ ಸಣ್ಣ ವ್ಯಾಪಾರಿಗಳು, ಕುಶಲಕರ್ಮಿಗಳು ಹಾಗೂ ಸ್ಥಳೀಯ ಉದ್ಯಮಿಗಳಿಗೆ ಆರ್ಥಿಕವಾಗಿ ನೆರವಾಗಬೇಕು. ನಮ್ಮ ನಾಡಿನ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸ್ಥಳೀಯ ವ್ಯಾಪಾರಿಗಳ ಬದುಕಿಗೆ ಆಸರೆಯಾಗಬೇಕು ಎಂಬ ಸಂದೇಶ ಸಾರಿದರು.


ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸ್ಥಳೀಯವಾಗಿ ತಯಾರಿಸಿದ ವಸ್ತುಗಳನ್ನು ಖರೀದಿಸುವ ಮೂಲಕ ಪ್ರಧಾನಿ ಮೋದಿ ಅವರ ವೋಕಲ್ ಫಾರ್ ಲೋಕಲ್ ಕರೆಯನ್ನು ಪ್ರತಿ ಯೊಬ್ಬರೂ ಪಾಲಿಸಬೇಕು ಎಂಬ ಸಂದೇಶವನ್ನು ತಮ್ಮ ನಡೆ ಮೂಲಕ ತೋರಿಸಿಕೊಟ್ಟರು. ಈ ಸಂದರ್ಭದಲ್ಲಿ ಅವರ ಪುತ್ರಿ ಲಕ್ಷ್ಮಿ ಹಾಗೂ ಸಹೋದರ ಈರಣ್ಣಾ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

