Belagavi

ಕಾನೂನು ಶಿಕ್ಷಣದಲ್ಲಿ ಪ್ರಾಯೋಗಿಕ ಜ್ಞಾನ ಬೆಳೆಸಿಕೊಳ್ಳಿ: ನ್ಯಾಯಮೂರ್ತಿ ಅನಿಲ್ ಕಟ್ಟಿ ಕಳವಳ

Share

ಬೆಳಗಾವಿಯ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಸಮಕಾಲೀನ ಕಾಲಘಟ್ಟದಲ್ಲಿ ಕಾನೂನು ಶಿಕ್ಷಣವನ್ನು ಮರುಕಲ್ಪಿಸಿಕೊಳ್ಳುವುದು ಕುರಿತ ಸೆಮಿನಾರ್‌ನಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನಿಲ್ ಕಟ್ಟಿ ಅವರು ಮಾತನಾಡಿದರು. ಕಾನೂನು ವಿದ್ಯಾರ್ಥಿಗಳಲ್ಲಿ ಯೋಚಿಸುವ ಸಾಮರ್ಥ್ಯ ಹಾಗೂ ತರಗತಿ ಗೈರುಹಾಜರಿ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು.

ಬೆಳಗಾವಿಯ ಕೆ.ಎಲ್.ಎಸ್. ಕಾಲೇಜಿನ ವೇಣುಗೋಪಾಲ್ ಸಭಾಗೃಹದಲ್ಲಿ ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಹಾಗೂ ಬೆಳಗಾವಿಯ ಕೆ.ಎಲ್.ಎಸ್. ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವತಿಯಿಂದ ಸಮಕಾಲೀನ ಕಾಲಘಟ್ಟದಲ್ಲಿ ಕಾನೂನು ಶಿಕ್ಷಣವನ್ನು ಮರುಕಲ್ಪಿಸಿಕೊಳ್ಳುವುದು ವಿಷಯವಾಗಿ ಒಂದು ದಿನದ ಸೆಮಿನಾರ್ ಅನ್ನು ಆಯೋಜಿಸಲಾಗಿತ್ತು. ಈ ವಿಚಾರಸಂಕಿರಣವನ್ನು ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿ ಅನೀಲ್ ಕತ್ತಿ ಅವರು ಉದ್ಘಾಟಿಸಿ ಮಾತನಾಡಿದರು.

ಈ ವೇಳೆ ಮಾತನಾಡಿದ ಅವರು, ಕಾನೂನು ವಿದ್ಯಾರ್ಥಿಗಳಲ್ಲಿ ಯೋಚಿಸುವ ಸಾಮರ್ಥ್ಯ ಮತ್ತು ಮನವರಿಕೆ ಮಾಡುವ ಕೌಶಲ್ಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇದು ಕಾನೂನು ವ್ಯವಸ್ಥೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ತರಗತಿಗಳಿಗೆ ನಿಯಮಿತವಾಗಿ ಹಾಜರಾಗದೆ ಕೇವಲ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಾನೂನು ಶಿಕ್ಷಣದಲ್ಲಿ ಕೇವಲ ಸೈದ್ಧಾಂತಿಕ ಜ್ಞಾನವಷ್ಟೇ ಅಲ್ಲದೆ, ಪ್ರಾಯೋಗಿಕ ತರಬೇತಿ ಮತ್ತು ಪ್ರಾಯೋಗಿಕ ದೃಷ್ಟಿಕೋನ ಅತ್ಯಂತ ಅವಶ್ಯಕವಾಗಿದೆ ಎಂದರು. ಅಲ್ಲದೆ, ವಿದ್ಯಾರ್ಥಿಗಳು ಮೊದಲ ವರ್ಷದಿಂದಲೇ ವಕೀಲ ವೃತ್ತಿ ಅಥವಾ ಕಾರ್ಪೊರೇಟ್ ರಂಗದ ಕುರಿತು ಸ್ಪಷ್ಟ ಗುರಿ ಹೊಂದಿರಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಅಧ್ಯಕ್ಷ ಪ್ರೋ. ಸಿ.ಎಸ್. ಪಾಟೀಲ್ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿದ್ದರು. ಗವರ್ನಿಂಗ್ ಕೌನ್ಸಿಲ್ ಚೇರಮನ್ ಆರ್.ಎಸ್. ಮುತಾಲಿಕ್ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ. ಎ.ಎಚ್. ಹವಾಲದಾರ್, ಕೋ ಆರ್ಡಿನೇಟರ್ ಡಾ. ಶಿಲ್ಪಾ ರಾಯಕರ, ರಿಸರ್ಚ್ ಹೆಡ್ ರೇವಯ್ಯ ಒಡೆಯರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Tags:

error: Content is protected !!