Vijaypura

ಹೈಟೆನ್ಷನ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Share

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಎನ್‌ಟಿಪಿಸಿ ಶಾಖೋತ್ಪನ್ನ ವಿದ್ಯುತ್ ಘಟಕದ ಸಮೀಪವಿರುವ ಬೃಹತ್ ಹೈಟೆನ್ಷನ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಹೈಟೆನ್ಷನ್ ವಿದ್ಯುತ್ ಗೋಪುರಕ್ಕೆ ವ್ಯಕ್ತಿಯ ಶವ ಇರುವುದನ್ನ ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಬಸವನ ಬಾಗೇವಾಡಿ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನ ಕೆಳಗೆ ಇಳಿಸಿದರು. ಕೂಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!