Khanapur

ಖಾನಾಪುರ: 32 ವರ್ಷಗಳ ಕ್ರೀಡಾ ಸೇವೆ ಸಲ್ಲಿಸಿ ನಿವೃತ್ತರಾದ ಕಮಲಾಕಾಂತ ಪಾಟೀಲ

Share

ಖಾನಾಪುರದ ನಂದಗಡ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕಮಲಾಕಾಂತ ಪಾಟೀಲ (ಕೆ.ವಿ.) 32 ವರ್ಷಗಳ ಕಾಲ ಕ್ರೀಡಾ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆ ಸ್ಮರಣೀಯ. ಅವರ ನಿವೃತ್ತಿ ಸಮಾರಂಭದಲ್ಲಿ ಮಾಜಿ ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಗೌರವಪೂರ್ವಕವಾಗಿ ಸತ್ಕರಿಸಿದರು.

ಖಾನಾಪುರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದ ಮಹಾತ್ಮ ಗಾಂಧಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕ್ರೀಡಾ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಕೆ.ವಿ. ಎಂದೇ ಖ್ಯಾತರಾದ ಕಮಲಾಕಾಂತ ಪಾಟೀಲ ಅವರು ಇತ್ತೀಚೆಗೆ ಸೇವೆಯಿಂದ ನಿವೃತ್ತರಾದರು. ತಮ್ಮ ಅದ್ಭುತ ಕ್ರೀಡಾ ಚಾತುರ್ಯದಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದಿಂದ ಹಿಡಿದು ರಾಷ್ಟ್ರೀಯ ಮಟ್ಟದ ಅನೇಕ ಪ್ರತಿಭಾವಂತ ಕ್ರೀಡಾಪಟುಗಳನ್ನು ರೂಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮಹತ್ವವನ್ನು ಸಾರುತ್ತಾ ಬಂದಿದ್ದ ಇವರ ಸೇವೆಯನ್ನು ಗುರುತಿಸಿ, ಸ್ಥಳೀಯ ದುರ್ಗಾ ದೇವಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ನಿವೃತ್ತಿ ಸಮಾರಂಭದಲ್ಲಿ ಆಧಿ-ಮಾಜಿ ವಿದ್ಯಾರ್ಥಿಗಳು ಹಾಗೂ ಅಪಾರ ಅಭಿಮಾನಿಗಳು ಪಾಲ್ಗೊಂಡು ಸನ್ಮಾನಿಸಿದರು. ಅಲ್ಲದೆ, ಅವರ ಮುಂದಿನ ನಿವೃತ್ತಿ ಜೀವನ ಸುಖ, ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರಲಿ ಎಂದು ಹಾರೈಸಿದರು.

Tags:

error: Content is protected !!