ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಗ್ರಾಮದ ಸಂಗಮನಾಥ ಸಕ್ಕರೆ ಕಾರ್ಖಾನೆಯಲ್ಲಿ ಈ ವರ್ಷದ ಕಬ್ಬು ನುರಿಸುವ ಹಂಗಾಮಿನ ಹಿನ್ನೆಲೆಯಲ್ಲಿ ಅಳತೆ ಮತ್ತು ತೂಕ ಮಾಪನ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದರು.
ಸಿಂದಗಿ ತಾಲೂಕಿನ ಯುವ ಘಟಕದ ಅಧ್ಯಕ್ಷ ಪ್ರಶಾಂತ್ ಭೂಸನೂರ, ಗೌರವಾಧ್ಯಕ್ಷ ಬಾಳು ಕುಂಬಾರ, ಧರೆಪ್ಪಗೌಡ ಬಿರಾದಾರ, ರಾಘವೇಂದ್ರ ಹೂಗಾರ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಜಗದೇವಿ ಬಿರಾದಾರ ಸೇರಿದಂತೆ ಹಲವು ಮುಖಂಡರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಕಾರ್ಖಾನೆಯಲ್ಲಿ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾರ್ಖಾನೆಯ ಕಬ್ಬು ತೂಕದ ಯಂತ್ರಗಳನ್ನು ಪರಿಶೀಲಿಸಿ, ನಿಯಮಾನುಸಾರ ಸೀಲ್ ಮಾಡಲಾಯಿತು. ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಯಾವುದೇ ಅನ್ಯಾಯವಾಗದಂತೆ ಪಾರದರ್ಶಕವಾಗಿ ತೂಕ ಮಾಪನ ನಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಯಿತು.
Vijaypura
ಸಂಗಮನಾಥ ಸಕ್ಕರೆ ಕಾರ್ಖಾನೆಯಲ್ಲಿ ಅಳತೆ ಮತ್ತು ತೂಕ ಮಾಪನ ಇಲಾಖೆ ಅಧಿಕಾರಿಗಳಿಂದ ತಪಾಸಣೆ – ಕಬ್ಬು ತೂಕದ ಯಂತ್ರಗಳಿಗೆ ಸೀಲ್
