ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಸಚಿವ ಶಿವಾನಂದ ಕೌಜಲಗಿ ಅವರ ನಿಧನದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಜಿ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬೈಲಹೊಂಗಲದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಿವಂಗತ ಶಿವಾನಂದ ಕೌಜಲಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದ ಅವರು, ಪುತ್ರ ಹಾಗೂ ಶಾಸಕ ಮಹಾಂತೇಶ ಕೌಜಲಗಿ ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಹಾಗೂ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಅಧ್ಯಕ್ಷರಾಗಿ ಶಿವಾನಂದ ಕೌಜಲಗಿ ಅವರು ಶಿಕ್ಷಣ, ಸಮಾಜಸೇವೆ ಮತ್ತು ಸಾರ್ವಜನಿಕ ಜೀವನಕ್ಕೆ ಸಲ್ಲಿಸಿದ ಕೊಡುಗೆ ಅಪಾರ. ಅವರ ಸೇವೆ ಹಾಗೂ ಜನಪರ ಕಾರ್ಯಗಳು ಸದಾ ಸ್ಮರಣೀಯ ಎಂದು ಲಕ್ಷ್ಮೀ ಹೆಬ್ಬಾಳಕರ್ ಅವರು ಈ ಸಂದರ್ಭದಲ್ಲಿ ಸ್ಮರಿಸಿದರು. ಅವರ ನಿಧನದಿಂದ ಸಾರ್ವಜನಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.
