hubbali

ಆಕಸ್ಮಿಕ ಬೆಂಕಿಗೆ ನಾಲ್ಕು ಬಣವೆಗಳು ಭಸ್ಮ : ಸಂಕಷ್ಟಕ್ಕೆ ಸಿಲುಕಿದ ರೈತರು

Share

ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ನಾಲ್ಕು ಬಣವೆಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತರಿಗೆ ಸೇರಿದ ಹೊಟ್ಟಿನ ಬಣವೆಗಳಿಗೆ ಏಕಾಏಕಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ನಾಲ್ಕು ಬಣವೆಗಳನ್ನು ಆವರಿಸಿದೆ. ಬಣವೆಗಳಲ್ಲಿದ್ದ ಮೇವು ಹಾಗೂ ದವಸ ಧಾನ್ಯಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆತಂಕಗೊಂಡ ಗ್ರಾಮಸ್ಥರು ಒಗ್ಗೂಡಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶೀತಲ್‌ ನಾಗರಹಳ್ಳಿ, ಶಿವಾನಂದ, ತಂಗ್ಯಮ್ಮನವರ ಹಾಗೂ ಯಲ್ಲಪ್ಪ ಕಲಿವಾಳ ಅವರಿಗೆ ಸೇರಿದ ಬಣವೆಗಳು ಬೆಂಕಿಗಾಹುತಿಯಾಗಿದ್ದು, ಅಂದಾಜು ₹15 ಲಕ್ಷ ಮೌಲ್ಯದ ನಷ್ಟ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಮಾಡಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

error: Content is protected !!