ರಾಜ್ಯ ಸರ್ಕಾರವು ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನೂತನ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಚಿಕ್ಕೋಡಿ ತಾಲೂಕಿನ ಐವರು ಹಿರಿಯ ಮುಖಂಡರಿಗೆ ಮಹತ್ವದ ಸ್ಥಾನಮಾನ ಲಭಿಸಿದೆ.
ರವೀಂದ್ರ ಶಂಕರ ಮಿರ್ಜಿ ನಿರ್ದೇಶಕರು, ಕರ್ನಾಟಕ ರಾಜ್ಯ ಜೈವಿಕ ವೈವಿಧ್ಯ ಮಂಡಳಿ.ಮಲ್ಲಿಕಾರ್ಜುನ ಜ್ಯೋತಿಗೌಡಾ ಪಾಟೀಲ ನಿರ್ದೇಶಕರು, ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ, ಬಾಗಲಕೋಟೆ, ಅನೀಲ ವಿಠ್ಠಲ ಪಾಟೀಲ ನಿರ್ದೇಶಕರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ, ಹುಬ್ಬಳ್ಳಿ.
ಶ್ಯಾವರಾವ ರಾಜಾರಾಮ ರೇವಡೆ ನಿರ್ದೇಶಕರು, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ),ವಿದ್ಯಾಧರ ಬಾಳಾಸಾಬ ಕಾಗೆ ನಿರ್ದೇಶಕರು, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಹೀಗೆ ಐವರರನ್ನು ನೇಮಕ ಮಾಡಲಾಗಿದೆ.
ಪಕ್ಷ ಸಂಘಟನೆ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಈ ಮುಖಂಡರ ಕಾರ್ಯವನ್ನು ಗುರುತಿಸಿ ಸರ್ಕಾರವು ಈ ಜವಾಬ್ದಾರಿ ನೀಡಿದೆ. ನೂತನ ನಿರ್ದೇಶಕರು ತಮ್ಮ ಅಧಿಕಾರಾವಧಿಯಲ್ಲಿ ಉತ್ತಮ ಕಾರ್ಯನಿರ್ವಹಿಸಿ, ತಾಲೂಕಿನ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೃತ್ಪೂರ್ವಕವಾಗಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಇದೇ ಸಂದರ್ಭದಲ್ಲಿ ನೂತನ ನಿಗಮ ಮಂಡಳಿಯ ನಿರ್ದೇಶಕರಾದ ಅನೀಲ ಪಾಟೀಲ, ಶ್ಯಾಮ ರೇವಡೆ ಮಾತನಾಡಿ ಈ ಸ್ಥಾನ ಕಾರಣಿಕರ್ತರಾದ ಶಾಸಕ ಗಣೇಶ ಹುಕ್ಕೇರಿ, ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಗೆ ಧನ್ಯವಾದ ಅರ್ಪಿಸಿದರು.
