Bailahongala

ಪತ್ರಕರ್ತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಹೋರಾಟದ ಸಿದ್ಧತೆ

Share

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಪತ್ರಕರ್ತರ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟದ ರೂಪುರೇಷೆ ಸಿದ್ಧಪಡಿಸಲು ಪೂರ್ವಭಾವಿ ಸಭೆ ನಡೆಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯನ್ನು ರಾಜ್ಯಾದ್ಯಂತ ಮತ್ತಷ್ಟು ಬಲಿಷ್ಠವಾಗಿ ಬೆಳೆಸುವ ಉದ್ದೇಶದಿಂದ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಿಂದ ಆಗಮಿಸಿದ ಪತ್ರಕರ್ತರ ಸಮ್ಮುಖದಲ್ಲಿ ಹೊಸ ಸದಸ್ಯರ ಸೇರ್ಪಡೆ ಹಾಗೂ ವಿವಿಧ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ಇದೇ ಸಂದರ್ಭದಲ್ಲಿ ಬೈಲಹೊಂಗಲ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೂತನ ಅಧ್ಯಕ್ಷರಾಗಿ ಶಿವು ಜೋಳದ ಅವರನ್ನು ಆಯ್ಕೆ ಮಾಡಲಾಯಿತು.

ಸಂಘಟನೆಯ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ ಅವರು ಬೈಲಹೊಂಗಲಕ್ಕೆ ಆಗಮಿಸಿ ಅಧಿಕೃತವಾಗಿ ಘೋಷಣೆ ಮಾಡಿದರು.ನೂತನ ಅಧ್ಯಕ್ಷ ಶಿವು ಜೋಳದ ಅವರ ನೇತೃತ್ವದಲ್ಲಿ ಸಂಘಟನೆಯ ವಿವಿಧ ಸ್ಥಾನಗಳಿಗೆ ಹೊಸ ಮುಖಗಳನ್ನು ಆಯ್ಕೆ ಮಾಡಲಾಗಿದ್ದು, ಈ ಮೂಲಕ ಸಂಘಟನೆಗೆ ಮತ್ತಷ್ಟು ಬಲ ತುಂಬುವ ಪ್ರಯತ್ನ ನಡೆಯಿತು.ಪತ್ರಕರ್ತರಿಗೆ ಸೂಕ್ತ ಬಸ್ ಪಾಸ್ ಸೌಲಭ್ಯ, ಆರೋಗ್ಯ ಸೌಲಭ್ಯ, ಪತ್ರಕರ್ತರ ರಕ್ಷಣಾ ಕಾಯ್ದೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದು, ಸುವರ್ಣಸೌಧದ ಮುಂದೆ ಬೃಹತ್ ಹೋರಾಟ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ. ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಸಾಕಷ್ಟು ಪತ್ರಕರ್ತರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪತ್ರಕರ್ತರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ.
ಬಸ್ ಪಾಸ್ ಸೌಲಭ್ಯ, ಆರೋಗ್ಯ ಸೌಲಭ್ಯ ಹಾಗೂ ಪತ್ರಕರ್ತರ ರಕ್ಷಣಾ ಕಾಯ್ದೆ ಸೇರಿದಂತೆ ಹಲವು ಬೇಡಿಕೆಗಳ ಬಗ್ಗೆ ಸರ್ಕಾರ ಗಂಭೀರವಾಗಿ ಗಮನಹರಿಸಬೇಕು.ಕಳೆದ ಮೂರು ವರ್ಷಗಳಿಂದ ಸುವರ್ಣಸೌಧದ ಮುಂದೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಹೋರಾಟದ ಫಲವಾಗಿ ಸರ್ಕಾರ ಈಗಾಗಲೇ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಕಲ್ಪಿಸಿದೆ. ಆದರೆ ಇನ್ನೂ ಹೆಚ್ಚಿನ ಪತ್ರಕರ್ತರಿಗೆ ಈ ಸೌಲಭ್ಯ ತಲುಪಬೇಕಾಗಿದೆ.ನಮ್ಮ ಸಂಘಟನೆಯ ಎಲ್ಲ ಪತ್ರಕರ್ತರು ತಮ್ಮ ಬೇಡಿಕೆಗಳನ್ನು ರಕ್ತದಲ್ಲಿ ಪತ್ರ ಬರೆದು ಸ್ಥಳೀಯ ಶಾಸಕರು, ಸಂಸದರು ಹಾಗೂ ಸಚಿವರಿಗೆ ಸಲ್ಲಿಸಲಿದ್ದಾರೆ. ಕಾರ್ಮಿಕರ ಕಾಯ್ದೆಗಳು ಪತ್ರಕರ್ತರಿಗೂ ಅನ್ವಯವಾಗಬೇಕು. ಪತ್ರಕರ್ತರ ಸಮಸ್ಯೆಗಳಿಗೆ ಸರ್ಕಾರ ಸೂಕ್ತ ಸ್ಪಂದನೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ವರದಿಗಾರ:
ಶಾನೂಲ ಮತ್ತೆಖಾನ
ಬೈಲಹೊಂಗಲ.

Tags:

error: Content is protected !!