Khanapur

ಹೈದರಾಬಾದ್‌ನ ‘ಭಾರತ್ ಸಮ್ಮಿಟ್’ನಲ್ಲಿ ಡಾ. ಅಂಜಲಿ ನಿಂಬಾಳ್ಕರ್ ಭಾಗಿ; ಗೋವಾ ಚುನಾವಣೆ ಸಿದ್ಧತೆ ಕುರಿತು ಮಹತ್ವದ ಚರ್ಚೆ

Share

ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ಹೈದರಾಬಾದ್‌ನಲ್ಲಿ ನಡೆದ ‘ಭಾರತ್ ಸಮ್ಮಿಟ್’ನಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ. ಗೋವಾ ರಾಜ್ಯದ ಉಸ್ತುವಾರಿಯೂ ಆಗಿರುವ ಅವರು, ಮುಂಬರುವ ಗೋವಾ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಕುರಿತು ರಾಷ್ಟ್ರೀಯ ನಾಯಕರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಮತ್ತು ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಗೋವಾ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು, ಇದೇ ಸಂದರ್ಭದಲ್ಲಿ ಮುಂಬರುವ ಗೋವಾ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ಹಾಗೂ ಯುವ ಕಾಂಗ್ರೆಸ್ ಸಂಘಟನೆಯ ಕುರಿತು ಯುವ ಕಾಂಗ್ರೆಸ್ ಉಸ್ತುವಾರಿ ಮನೀಶ್ ಶರ್ಮಾ, ರಾಷ್ಟ್ರೀಯ ಅಧ್ಯಕ್ಷ ಉದಯ ಭಾನು ಚಿಬ್, ಸುಪ್ರಿಯಾ ಭಾರದ್ವಾಜ್ ಮತ್ತು ಉಷಾ ನಾಯ್ಡು ಅವರೊಂದಿಗೆ ಚರ್ಚಿಸಿ ಅಗತ್ಯ ಮಾರ್ಗದರ್ಶನ ನೀಡಿದರು. ರಾಷ್ಟ್ರ ರಾಜಕಾರಣದಲ್ಲಿ ಪಕ್ಷದ ಬಲವರ್ಧನೆಗೆ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Tags:

error: Content is protected !!