ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕವಾಗಿ ಯಾವತ್ತೂ ಬಂದು ಮಾತನಾಡಿಲ್ಲ. ಅವರು ನಮ್ಮ ಪ್ರಶ್ನೆಗಳಿಗೆ ಯಾವತ್ತೂ ಉತ್ತರ ಕೊಟ್ಟಿಲ್ಲ. ಅವರು ಮನ್ ಕಿ ಬಾತ್ ಯಾರ ಜೊತೆ ಮಾಡುತ್ತಾರೆ ಎಂದು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಸಾರ್ವಜನಿಕವಾಗಿ ಎಲ್ಲರ ಮುಂದೆ ಮಾತನಾಡುವುದು ಪ್ರಜಾಪ್ರಭುತ್ವ. ಮೋದಿ ಅವರು ಡಿಕ್ಟೇಟರ್ಶಿಪ್ನಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಪ್ರಧಾನಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಧಿಕ್ಕರಿಸಿದ್ದಾರೆ. ಫೋನ್ ಕದ್ದಾಲಿಕೆ ವಿಚಾರವಾಗಿ ನಮ್ಮ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿರುವುದು ಸುಳ್ಳಲ್ಲ. ಸುಳ್ಳು ಹೇಳುವುದು ಬಿಜೆಪಿ ಪಕ್ಷದ ಕೆಲಸ. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಏನು ಹೇಳಿತ್ತು? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿತ್ತು. ಅವರು ಸುಳ್ಳನ್ನೇ ಅಚ್ಚುಕಟ್ಟಾಗಿ ಹೇಳುತ್ತಾರೆ. ದೇಶ ಉದ್ಧಾರ ಮಾಡುತ್ತೇವೆ ಎನ್ನುತ್ತಾರೆ. ಯಾವ ಕ್ಷೇತ್ರದಲ್ಲಿ ಇವರು ಅಭಿವೃದ್ಧಿ ಮಾಡಿದ್ದಾರೆ? ದೇಶದ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮಾಡಿದ ಸಾಧನೆಯ ಮೇಲೆಯೇ ಇವರು ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿಯವರಿಂದ ಏನೂ ಪ್ರಯೋಜನ ಆಗಿಲ್ಲ. ಎಸ್ಐಆರ್ನಲ್ಲಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಅವರದ್ದೇ ಪಕ್ಷದ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೇ ಎಸ್ಐಆರ್ ಬಗ್ಗೆ ಮಾತನಾಡಿದ್ದಾರೆ. ಅದನ್ನೇ ನಾವು ಹೇಳಿದರೆ ತಪ್ಪು. ಈಗ ಅವರದ್ದೇ ಪಕ್ಷದ ನಾಯಕ ಎಸ್ಐಆರ್ ಬಗ್ಗೆ ಮಾತನಾಡುತ್ತಿದ್ದಾರೆ. ಇದರ ಬಗ್ಗೆ ಬಿಜೆಪಿಯವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಬೈಟ್ ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ.
