Dharwad

ಧಾರವಾಡದ 18 ಕೆಪಿಎಸ್‌ಸಿ ಪರೀಕ್ಷಾ ಕೇಂದ್ರಗಳಲ್ಲಿ ಭಾರಿ ಕಟ್ಟೆಚ್ಚರ; ಡಿಸಿ, ಕಮಿಷನರ್ ಭೇಟಿ

Share

ಧಾರವಾಡದಲ್ಲಿ 18 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಕೆಪಿಎಸ್‌ಸಿ ಪರೀಕ್ಷೆ ನಡೆಯುತ್ತಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಭಾರಿ ಕಟ್ಟೆಚ್ಚರ ವಹಿಸಿದೆ. ಜಿಲ್ಲಾಧಿಕಾರಿ ಆರ್. ಸ್ನೇಹಲ್ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಂಡರು.

ಧಾರವಾಡ ಕರ್ನಾಟಕ ಕಾಲೇಜಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಆರ್. ಸ್ನೇಹಲ್ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ, ಪರೀಕ್ಷಾ ಕೇಂದ್ರದ ಬಳಿಯ ಭದ್ರತೆ ಸೇರಿದಂತೆ ಇತರೆ ವಿಚಾರಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಒಟ್ಟು 319 ಹುದ್ದೆಗಳಿಗೆ ಕೆಪಿಎಸ್‌ಸಿ ಪರೀಕ್ಷೆ ನಡೆಯುತ್ತಿದ್ದು, ಧಾರವಾಡದ 18 ಕೇಂದ್ರಗಳಲ್ಲಿ ಆಕಾಂಕ್ಷಿಗಳು ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನಾವಶ್ಯಕ ಓಡಾಟಕ್ಕೆ ನಿರ್ಬಂಧ ಹಾಕಲಾಗಿದೆ. ಜತೆಗೆ ಜೆರಾಕ್ಸ್ ಶಾಪ್ ಹಾಗೂ ಇತರೆ ಅಂಗಡಿಗಳ ವ್ಯಾಪಾರ-ವಹಿವಾಟನ್ನು ನಿರ್ಬಂಧಿಸಲಾಗಿದೆ. ಧಾರವಾಡದಲ್ಲಿ ಒಟ್ಟು 6,316 ಜನ ಪರೀಕ್ಷೆ ಬರೆಯುತ್ತಿದ್ದು, ಮುಂಜಾನೆ 10ರಿಂದ 12 ಹಾಗೂ ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ.

Tags:

error: Content is protected !!