State

ಬೆಂಗಳೂರಲ್ಲಿ ರೌಡಿಸಂ ಮಟ್ಟಹಾಕಲು ಹೈ-ಟೆಕ್ ಸ್ಕ್ವಾಡ್: ಡಿಕೆಶಿ ಮಹತ್ವದ ಘೋಷಣೆ!

Share

ಬೆಂಗಳೂರು ಮಹಾನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಮತ್ತು ರೌಡಿಸಂ ಚಟುವಟಿಕೆಗಳಿಗೆ ಕಡೇಹಾಕಲು ರಾಜ್ಯ ಸರ್ಕಾರದಿಂದ ಕಠಿಣ ಹೆಜ್ಜೆ ಇಡಲಾಗಿದೆ. ಸ್ಥಳೀಯ ಠಾಣೆಗಳ ಹಸ್ತಕ್ಷೇಪವಿಲ್ಲದೆ ಹಿರಿಯ ಅಧಿಕಾರಿಗಳ ನೇರ ನಿಯಂತ್ರಣದಲ್ಲಿ ಪ್ರತ್ಯೇಕ ‘ರೌಡಿ ಸ್ಕ್ವಾಡ್’ ರಚನೆಯಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ತಲೆಎತ್ತುತ್ತಿರುವ ರೌಡಿಸಂ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ಹೊರತಾಗಿ, ಹಿರಿಯ ಉನ್ನತ ಅಧಿಕಾರಿಗಳ ನೇರ ಮೇಲ್ವಿಚಾರಣೆಯಲ್ಲಿ ಪ್ರತ್ಯೇಕವಾದ ‘ರೌಡಿ ಸ್ಕ್ವಾಡ್’ (Rowdy Squad) ರಚನೆಗೆ ಚಾಲನೆ ನೀಡಲಾಗಿದೆ. ಕೆಲವೊಮ್ಮೆ ಸ್ಥಳೀಯ ಪೊಲೀಸರೊಂದಿಗೆ ಅಪರಾಧಿಗಳು ಹೊಂದಾಣಿಕೆ ಮಾಡಿಕೊಂಡು ರಹಸ್ಯ ಮಾಹಿತಿ ಸೋರಿಕೆ ಮಾಡುತ್ತಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಈ ಸೋರಿಕೆಗೆ ತಡೆಹಾಕಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ನಿರ್ದಿಷ್ಟ ಪಡೆಯನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ, ಯುವ ಜನತೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ಸ್ ಮಾಫಿಯಾವನ್ನು ರಾಜ್ಯದಿಂದ ಬೇರುಸಹಿತ ಕಿತ್ತುಹಾಕಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿರುವ ಅವರು, ಈಗಾಗಲೇ ಈ ನಿಟ್ಟಿನಲ್ಲಿ ಗಂಭೀರ ತನಿಖೆ ನಡೆಸಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ಬೆಂಗಳೂರು ನಗರದಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳಿಗೂ ಅವಕಾಶ ನೀಡದೆ ಸಾರ್ವಜನಿಕರಿಗೆ ಶಾಂತಿ ಮತ್ತು ಸುರಕ್ಷತೆಯ ವಾತಾವರಣ ಕಲ್ಪಿಸಲು ಪೊಲೀಸ್ ಇಲಾಖೆಗೆ ಸಂಪೂರ್ಣ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!