hubbali

ಹುಬ್ಬಳ್ಳಿಯಲ್ಲಿ ಕತ್ತಿ ತೋರಿಸಿ ಸಾರ್ವಜನಿಕರಿಗೆ ಬಯ ಹುಟ್ಟುಸುತ್ತಿದ್ದ : ಓರ್ವ ಆರೋಪಿ ಬಂಧನ

Share

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಕತ್ತಿ ತೋರಿಸಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಆರೋಪಿಯೊಬ್ಬನನ್ನು ಬೆಂಡಿಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ಗಬ್ಬೂರ ಸರ್ಕಲ್‌ನ ಸಾರ್ವಜನಿಕ ರಸ್ತೆಯಲ್ಲಿ ನವೆಂಬರ್ 15ರ ರಾತ್ರಿ ಸುಮಾರು 11 ಗಂಟೆ 15 ನಿಮಿಷದ ಅವಧಿಯಲ್ಲಿ ದುಷ್ಕರ್ಮಿಯೊಬ್ಬ ಅಪರಾಧ ಎಸಗುವ ಉದ್ದೇಶದಿಂದ ಸಾರ್ವಜನಿಕರಿಗೆ ಕತ್ತಿ ತೋರಿಸಿ ಭಯ ಹುಟ್ಟಿಸುತ್ತಿದ್ದ.
​ಈ ಬಗ್ಗೆ ಖಚಿತ ಮಾಹಿತಿ ಪಡೆದ ಬೆಂಡಿಗೇರಿ ಪೊಲೀಸ್ ಠಾಣೆಯ ಆಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ (Anti-Stabbing Squad) ತಂಡವು ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಹಳೇಹುಬ್ಬಳ್ಳಿಯ ಈಶ್ವರ ನಗರ ನಿವಾಸಿ ಖ್ವಾಜಾಹುಸೇನ ನದಾಫ್ ಎಂದು ಗುರುತಿಸಲಾಗಿದೆ.
​ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ ಒಂದು ಕತ್ತಿ ಹಾಗೂ ಒಂದು ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ವೇಳೆ ಈತನೊಂದಿಗಿದ್ದ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ 1959ರ ಶಸ್ತ್ರಾಸ್ತ್ರ ಕಾಯ್ದೆಯ ಕಲಂ 27(1)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

Tags:

error: Content is protected !!