ಸಹಕಾರ ಸಚಿವ ಲಕ್ಷ್ಮಣ ಸವದಿ ತವರು ಕ್ಷೇತ್ರದಲ್ಲಿ ನಡೆದ ಬೃಹತ್ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಗೈರಾಗಿದ್ದು ಹಲವು ಚರ್ಚೆಗೆ ಕಾರಣವಾಗಿದೆ

ಹೌದು ಅಥಣಿಯಲ್ಲಿ ನಡೆದ ಸೋಮವಾರ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿರುವ ರೈತ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ 73ನೇ ಸಹಕಾರಿ ಸಪ್ತಾಹ ಆಚರಣೆ ಹಾಗೂ ಸಹಕಾರಿ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ನಾಮಫಲಕ ಉದ್ಘಾಟನಾ ಕಾರ್ಯಕ್ರಮಕ್ಕೆ ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಗೈರಾಗಿದ್ದಾರೆ.

ಸೋಮವಾರ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲೇ ಇದ್ದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಆದರೆ ಅಥಣಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

ಕುತೂಹಲ ಎಂದರೆ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ್ ಕತ್ತಿ ಭಾಗವಹಿಸಿದ್ದಾರೆ. ಆದರೆ ಲಕ್ಷ್ಮಣ ಸವದಿ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರು ಬರದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆ ಮೂಡಿಸಿದ್ದು ಸುಳ್ಳಲ್ಲ.

