Belagavi

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಲೋಕಾ ಬಲೆಗೆ ಬಿದ್ದ ಎಸಿ ಕಚೇರಿ ಸಿಬ್ಬಂದಿ !!

Share

ಬೆಳಗಾವಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರದ ಮತ್ತೊಂದು ಜಾಲ ಬಯಲಾಗಿದೆ. ಪ್ರಕರಣವೊಂದನ್ನು ಎಸಿ ಕೋರ್ಟ್‌ಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿಬ್ಬಂದಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ ಉಪವಿಭಾಗಾಧಿಕಾರಿ (AC) ಕಚೇರಿಯ ಎಸ್‌ಡಿಎ ಸಿಬ್ಬಂದಿ ಪದ್ಮಾಕರ್ ಪಾಟೀಲ್ ಅವರು, ಶುಭಂ ಅಪ್ಪಾರಾವ್ ಎಂಬುವವರ 37 ಪ್ರಕರಣಗಳನ್ನು ಎಸಿ ಕೋರ್ಟ್‌ಗೆ ವರ್ಗಾವಣೆ ಮಾಡಲು ಒಟ್ಟು 30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ದೂರುದಾರರು ನೀಡಿದ ಖಚಿತ ದೂರಿನ ಮೇರೆಗೆ ಲೋಕಾಯುಕ್ತ ಎಸ್‌ಪಿ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಗಡವಾಗಿ 2 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಪದ್ಮಾಕರ್ ಪಾಟೀಲ್ ಅವರು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಅಧಿಕಾರಿಗಳು ತೀವ್ರ ತನಿಖೆ ಮುಂದುವರೆಸಿದ್ದಾರೆ.

Tags:

error: Content is protected !!