State

ಬೆಂಗಳೂರಿನ ಪ್ರವಾಹ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್: ಗುಂಜೂರಿನಲ್ಲಿ ಕಾಮಗಾರಿಗೆ ಸಿಎಂ ಚಾಲನೆ

Share

ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಪ್ರವಾಹ ತಡೆಗಟ್ಟಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿಶ್ವಬ್ಯಾಂಕ್ ನೆರವಿನೊಂದಿಗೆ ಕೈಗೆತ್ತಿಕೊಂಡಿರುವ ಬೃಹತ್ ನೀರುಗಾಲುವೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ಗುಂಜೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀರುಗಾಲುವೆ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ವಿಶ್ವಬ್ಯಾಂಕ್ ನೆರವಿನ ‘ಕರ್ನಾಟಕ ಜಲ ಭದ್ರತೆ ಮತ್ತು ವಿಪತ್ತು ಸ್ಥಿತಿಸ್ಥಾಪಕತ್ವ ಕಾರ್ಯಕ್ರಮ’ದ ಅಡಿಯಲ್ಲಿ ಈ ಯೋಜನೆಯನ್ನು ರೂಪಿಸಲಾಗಿದ್ದು, ಶಂಕುಸ್ಥಾಪನೆಯ ಬಳಿಕ ಸಿಎಂ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಮಹತ್ವದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಸ್ಥಳೀಯ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ವಿಧಾನಪರಿಷತ್ ಸದಸ್ಯ ಎ.ಪಿ. ರಂಗನಾಥ್, ಮಾಜಿ ಸಚಿವ ಹೆಚ್. ನಾಗೇಶ್ ಹಾಗೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!