Belagavi

ಎಂಜಿನ್ ಹಾನಿ ದೂರಿನ ಬೆನ್ನಲ್ಲೇ ಬೆಳಗಾವಿಯಲ್ಲಿ ಪೆಟ್ರೋಲ್ ಗುಣಮಟ್ಟ ಪರೀಕ್ಷೆಗೆ ಡಿಸಿ ಆದೇಶ!!!

Share

ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣದಿಂದ ವಾಹನಗಳ ಎಂಜಿನ್ ಹಾನಿಯಾಗುತ್ತಿದೆ ಎಂಬ ಖಾಸಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ಮೂರು ಪೆಟ್ರೋಲ್ ಬಂಕ್‌ಗಳ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯಿಲ್ ಮಾರ್ಕೆಟಿಂಗ್ ಕಂಪನಿಗಳಿಂದ ಸರಬರಾಜಾಗುವ ಪೆಟ್ರೋಲ್ ನಿಗದಿತ ಗುಣಮಟ್ಟ ಹಾಗೂ ಮಾನದಂಡಗಳಿಗೆ ಅನುಗುಣವಾಗಿರಬೇಕು. ಆದರೆ, ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣದಿಂದ ವಾಹನಗಳ ಎಂಜಿನ್ ಕೆಟ್ಟುಹೋಗುತ್ತಿವೆ ಎಂಬ ಸಾರ್ವಜನಿಕರಿಂದ ಖಾಸಗಿ ದೂರುಗಳು ಬಂದಿವೆ ಎಂದರು.

ಈ ಹಿನ್ನೆಲೆಯಲ್ಲಿ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ನಗರದ ಮೂರು ಪೆಟ್ರೋಲ್ ಬಂಕ್‌ಗಳಿಂದ ಪೆಟ್ರೋಲ್ ಮಾದರಿಗಳನ್ನು ಸೂಕ್ಷ್ಮವಾಗಿ ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿ ಬಂದ ಬಳಿಕ ಪೆಟ್ರೋಲ್ ಗುಣಮಟ್ಟದಲ್ಲಿ ಲೋಪ ಕಂಡುಬಂದರೆ ಸಂಬಂಧಿಸಿದ ಪೆಟ್ರೋಲ್ ಬಂಕ್‌ಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಪೆಟ್ರೋಲ್ ಗುಣಮಟ್ಟದ ಕುರಿತು ಸಾರ್ವಜನಿಕರಿಂದ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪರಿಶೀಲನೆ ನಡೆಸುತ್ತಿದ್ದು, ಪ್ರಯೋಗಾಲಯದ ವರದಿಯ ಮೇಲೆ ಮುಂದಿನ ಕ್ರಮ ನಿರ್ಧರಿಸಲಾಗುವುದು ಎಂದು ಹೇಳಿದರು.

Tags:

error: Content is protected !!