Dharwad

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಅನುದಾನಿತ ಶಾಲಾ ಶಿಕ್ಷಕರ ಅನಿರ್ದಿಷ್ಟಾವಧಿ ಧರಣಿ

Share

ಅನುದಾನಿತ ಶಾಲೆಗಳ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ನೂರಾರು ಶಿಕ್ಷಕರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅನುದಾನಿತ ಶಾಲೆಗಳ ಶಿಕ್ಷಕರ ಸಂಘಟನೆ ನೇತೃತ್ವದಲ್ಲಿ ಟೆಂಟ್ ಹಾಕಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದಿನಿಂದಲೂ ಅನುದಾನಿತ ಶಾಲೆಗಳ ಶಿಕ್ಷಕರ ಸಮಸ್ಯೆ ಕುರಿತು ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಆದರೆ ಸರ್ಕಾರ ಮಾತ್ರ ನಮ್ಮ ಬೇಡಿಕೆಗಳಿಗೆ ಸ್ಪಂದನೆ ನೀಡುತ್ತಿಲ್ಲ ಎನ್ನುವ ಮೂಲಕ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಈ ಕೂಡಲೇ ರಾಜ್ಯ ಸರ್ಕಾರ ಅನುದಾನಿತ ಶಾಲಾ ಶಿಕ್ಷಕರ ಸಮಸ್ಯೆ ಜೊತೆಗೆ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಬೇಡಿಕೆ ಈಡೇರುವವರೆಗೂ ನಮ್ಮ ಈ ಹೋರಾಟ ಕೈಬಿಡುವುದಿಲ್ಲ ಎಂದು ಸರ್ಕಾರಕ್ಕೆ ಪ್ರತಿಭಟನಾನಿರತ ಶಿಕ್ಷಕರು ಖಡಕ್ ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!