Khanapur

ಎಐಸಿಸಿಯಿಂದ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರಿಗೆ ಮಹತ್ವದ ಜವಾಬ್ದಾರಿ

Share

ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಈಗಾಗಲೇ ಗೋವಾ ರಾಜ್ಯದ ಎಐಸಿಸಿ ಉಸ್ತುವಾರಿಗಳಾಗಿ ತಮ್ಮ ಸಂಘಟನಾತ್ಮಕ ಚತುರತೆಯಿಂದ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು ಈಗ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರೀಯಕಾ ಗಾಂಧಿ,ಕೆ.ಸಿ.ವೇಣುಗೋಪಾಲ್ ಅವರು ಗೋವಾ ಜೋತೆಗೆ ದಾದರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ರಾಜ್ಯಗಳ ಉಸ್ತುವಾರಿ ಹೊಣೆ ಕೂಡಾ ನೀಡಿದ್ದು ಈಗಾಗಲೇ ಎಐಸಿಸಿ ವತಿಯಿಂದ ಪಕ್ಷದ ಸಂಘಟನೆಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಸೋನಿಯಾಗಾಂಧಿ ಕುಟುಂಬದ ಸದಸ್ಯರೊಂದಿಗೆ ತಮ್ಮ ಸಂಘಟನಾತ್ಮಕ ಚತುರತೆಯಿಂದ ಹೆಸರು ಮಾಡಿರುವ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರಿಗೆ ಮತ್ತೊಂದು ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ ಇದಕ್ಕೆ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!