Belagavi

ಬೆಳಗಾವಿಯಲ್ಲಿ ಮಹಿಳೆಯ ಕತ್ತು ಹಿಸುಕಿ ಕೊಲೆ ಪ್ರಕರಣ

Share

ಬೆಳಗಾವಿ ನಗರದ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಅ.20ರಂದು ಮಹಿಳೆಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪೂನಂ ಅಮಿತ್ ಡೇಳೇಕರ್ (35) ಕೊಲೆಯಾದ ಮಹಿಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಂಜನ್ ಮರವೆ ಎಂಬ ಆರೋಪಿಯನ್ನು ಶಾಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.
ಮೃತ ಮಹಿಳೆ ಹಾಗೂ ಆರೋಪಿಯ ನಡುವೆ ಹಣಕಾಸಿನ ವ್ಯವಹಾರವಿತ್ತು ಎನ್ನಲಾಗಿದ್ದು, ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಉಂಟಾದ ದ್ವೇಷದಿಂದ ಆರೋಪಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದರು.
ಮಹಿಳೆಯ ಕುತ್ತಿಗೆಯ ಮೇಲೆ ಕತ್ತು ಹಿಸುಕಿದ ಗುರುತುಗಳು ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಲಭ್ಯವಾಗಿಲ್ಲ. ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ ಎಂದಿದ್ದಾರೆ.

Tags:

error: Content is protected !!