ಘಟಪ್ರಭಾ ಸಮೀಪದ ದೂಪದಾಳ ಗ್ರಾಮದ ಹಜರತ್ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಗಣ್ಯರು ಮತ್ತು ಹಿರಿಯರ ಸಮ್ಮುಖದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಕೊಡುಗೆಗಳನ್ನು ಸ್ಮರಿಸಲಾಯಿತು.
ಘಟಪ್ರಭಾ ಸಮೀಪದ ದೂಪದಾಳ ಗ್ರಾಮದ ಹಜರತ್ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ಹಮ್ಮಿಕೊಂಡಿದ್ದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಗ್ರಾಮದ ಗಣ್ಯರಾದ ಹಣಮಂತ ಗಾಡಿವಡ್ಡರ, ಮಹೇಶ್ ಪಾಟೀಲ ಹಾಗೂ ಮದಾರಸಾಬ ಜಗದಾಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅಖಿಲ ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕದ ಜಿಲ್ಲಾಧ್ಯಕ್ಷ ರೆಹಮಾನ್ ಮೊಕಾಶಿ, ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರರ ಜೊತೆಗೆ ಸಮಾಜ ಸುಧಾರಕರೂ ಆಗಿದ್ದರು; ಭಾರತಕ್ಕೆ ರೇಷ್ಮೆ ಕೃಷಿ ಹಾಗೂ ಕ್ಷಿಪಣಿ ತಂತ್ರಜ್ಞಾನ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಮತ್ತು ಶೋಷಿತರ ಪರವಾಗಿ ನಿಂತ ದೊರೆಯಾಗಿದ್ದರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಲ್ಲೊಳಿ ಗಾಡಿವಡ್ಡರ, ಲಾಲಾಸಾಬ ಜಗದಾಳ, ಶೆಟ್ಟೆಪ್ಪಾ ಗಾಡಿವಡ್ಡರ, ರವಿ ನಾವಿ, ರಾಜು ವಗ್ಗಣ್ಣವರ, ಕರೆಪ್ಪಾ ಧರ್ಮಟ್ಟಿ, ಗೋಪಾಲ ಕರಿಗಾರ, ಸಿದ್ದಪ್ಪ ತಳಗೇರಿ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.
