ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಸ್ವಿಮ್ಮಿಂಗ್ ಚಾಂಪಿಯನ್ಶಿಪ್ನಲ್ಲಿ ಬೆಳಗಾವಿಯ ಈಜುಪಟು ಓಂ ವೆಂಕಟೇಶ ಜುವಳಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾರೆ. 100 ಮೀಟರ್ ಬ್ಯಾಕ್ ಸ್ಟ್ರೋಕ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ಅವರು, ಅಂತರ ಕಾಲೇಜು ಈಜು ಸ್ಪರ್ಧೆಯಲ್ಲೂ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಭೋಪಾಲ್ನಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಸ್ವಿಮ್ಮಿಂಗ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಬೆಳಗಾವಿಯ ಓಂ ವೆಂಕಟೇಶ ಜುವಳಿ, 100 ಮೀಟರ್ ಬ್ಯಾಕ್ ಸ್ಟ್ರೋಕ್ನ ಸೀನಿಯರ್ ವಿಭಾಗದಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆಯೋಜಿಸಿದ್ದ ಅಂತರ ಕಾಲೇಜು ಈಜು ಸ್ಪರ್ಧೆಯಲ್ಲೂ ಮಿಂಚಿದ ಅವರು, 200 ಮೀಟರ್ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಚಿನ್ನ ಹಾಗೂ 100 ಮತ್ತು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಮತ್ತು 100 ಮೀಟರ್ ಬ್ಯಾಕ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ. ಇವರಿಗೆ ಎನ್ಐಎಸ್ ತರಬೇತುದಾರರಾದ ವಿಶ್ವಾಸ ಪವಾರ್, ಅಮಿತ್ ಜಾಧವ್, ರಣಜೀತ್ ಪಾಟೀಲ್ ಮಾರ್ಗದರ್ಶನ ಹಾಗೂ ಹಿಂದು ಸ್ಪೋರ್ಟ್ಸ್ ಕ್ಲಬ್ ಮತ್ತು ಹಿಂದು ಸೋಷಿಯಲ್ ಕ್ಲಬ್ ಪದಾಧಿಕಾರಿಗಳ ಪ್ರೋತ್ಸಾಹ ದೊರೆತಿದೆ.
