State

ಪರೀಕ್ಷಾ ವ್ಯವಸ್ಥೆಗೆ ಹೊಸ ಕಾಯಕಲ್ಪ: ನಂದನ್ ನಿಲೇಕಣಿ ಸಮಿತಿ ಜೊತೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸಭೆ!

Share

ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಆಮೂಲಾಗ್ರ ಸುಧಾರಣೆಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರೀಕ್ಷಾ ಸುಧಾರಣೆಗಳ ಉನ್ನತಾಧಿಕಾರ ಸಮಿತಿಯೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಗಳ ಸುಧಾರಣೆ ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರೀಕ್ಷಾ ಸುಧಾರಣೆಗಳ ಉನ್ನತಾಧಿಕಾರ ಸಮಿತಿ ಪ್ರತಿನಿಧಿಗಳೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಸಿದರು. ಉನ್ನತಾಧಿಕಾರ ಸಮಿತಿ ಅಧ್ಯಕ್ಷ ನಂದನ್ ನಿಲೇಕಣಿ, ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷ ಯು.ಟಿ. ಖಾದರ್, ಸಚಿವರಾದ ಬಸವರಾಜ ರಾಯರೆಡ್ಡಿ, ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ರಾಜ್ಯ ಸರ್ಕಾರ ರಚಿಸಿರುವ ಸಮಿತಿ ಅಧ್ಯಕ್ಷ ಎಸ್.ವಿ. ರಂಗನಾಥ್, ಸದಸ್ಯ ವಿಜಯಭಾಸ್ಕರ್, ಕೆ.ಇ.ಎ. ಕಾರ್ಯನಿರ್ವಾಹಕ ಅಧಿಕಾರಿ ಡಾ. ಹೆಚ್. ಪ್ರಸನ್ನ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಪರೀಕ್ಷಾ ಸುಧಾರಣೆಯ ರೂಪುರೇಷೆಗಳ ಕುರಿತು ಸಮಾಲೋಚನೆ ನಡೆಸಿದರು.

Tags:

error: Content is protected !!