hubbali

ಬೆಂಡಿಗೇರಿ ಪೊಲೀಸ್‌ ಠಾಣೆ ಎದುರು ಗಲಾಟೆ; ಏಳು ಜನ ಬಂಧನ

Share

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್‌ ಠಾಣೆಯ ಮುಂಭಾಗದಲ್ಲೇ ನುಗ್ಗಿ ಗಲಾಟೆ ನಡೆಸಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಠಾಣೆಯಲ್ಲಿ ಗಲಾಟೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತ ಭೂಷಣ್‌ ಬೊರಸೆ ಅವರು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಿ ಹೆಡೆಮುರಿ ಕಟ್ಟುವಲ್ಲಿ ಬೆಂಡಿಗೇರಿ ಪೊಲೀಸರ ತಂಡ ಯಶಸ್ವಿಯಾಗಿದೆ. ಪೊಲೀಸ್ ಠಾಣೆಯ ಎದುರಲ್ಲೇ ಗಲಾಟೆ ನಡೆಸಿದವರಿಗೆ ಇದೀಗ ಕಾನೂನಿನ ಬಿಸಿ ತಟ್ಟಿದೆ. ಸಾರ್ವಜನಿಕ ಶಾಂತಿಗೆ ಭಂಗ ತರುವವರಿಗೆ ಪೊಲೀಸ್ ಇಲಾಖೆ ಖಡಕ್‌ ಎಚ್ಚರಿಕೆ ನೀಡಿದಂತಾಗಿದೆ.

Tags:

error: Content is protected !!