State

ಹಿರಿಯೂರಿನಲ್ಲಿ ಪ್ರಜಾಸೇವೆ ಅಭಿಯಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

Share

ಪ್ರಜಾಸೇವೆ ಅಭಿಯಾನದ ಉದ್ಘಾಟನಾ ಸಮಾರಂಭವು ಇಂದು ಹಿರಿಯೂರು ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯುತ್ತಿದೆ. ಇದರ ಬೆನ್ನಲ್ಲೇ ವಸತಿ ಮತ್ತು ಭೂ ರಹಿತ ಕುಟುಂಬಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಭೂಗ್ಯಾರಂಟಿ ಯೋಜನೆ ಹಾಗೂ ಹೊಸ ಮನೆ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭೂಗ್ಯಾರಂಟಿ ಯೋಜನೆಯಡಿ ರಾಜ್ಯಾದ್ಯಂತ 15 ಲಕ್ಷ ಉಚಿತ ನಿವೇಶನ ಹಂಚಿಕೆಗೆ ಅನುಮೋದನೆ ನೀಡಲಾಗಿದೆ. ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳ ಅಭಿವೃದ್ಧಿಗೆ ₹1,000 ಕೋಟಿ ಮೀಸಲಿಡಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅರ್ಹರಿಗೆ ನಿವೇಶನ ಕಲ್ಪಿಸಲಾಗುವುದು. ಅಲ್ಲದೆ, ಫಲಾನುಭವಿಗಳಿಗೆ ಆಧಾರ್ ಆಧಾರಿತ ಇ-ಕೆವೈಸಿ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಕಾವೇರಿ 2.0 ವ್ಯವಸ್ಥೆಯಲ್ಲಿ ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಲು ನಿರ್ಧರಿಸಲಾಗಿದೆ. ಪ್ರಜಾಸೇವೆ ಅಭಿಯಾನದ ಉದ್ಘಾಟನಾ ಸಮಾರಂಭವು ಇಂದು ಹಿರಿಯೂರು ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯುತ್ತಿದೆ.

ಇದರ ಜತೆಗೆ 2026-27ನೇ ಸಾಲಿನಲ್ಲಿ ₹2,241 ಕೋಟಿ ವೆಚ್ಚದಲ್ಲಿ ಒಂದು ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೂ ಸಂಪುಟ ಒಪ್ಪಿಗೆ ನೀಡಿದ್ದು, ಗ್ರಾಮೀಣಕ್ಕೆ 68 ಸಾವಿರ ಮತ್ತು ನಗರಕ್ಕೆ 32 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಮನೆ ನಿರ್ಮಾಣ ಸಾಮಗ್ರಿಗಳ ಬೆಲೆ ಏರಿಕೆ ಹಿನ್ನೆಲೆ ಸಾಮಾನ್ಯ ವರ್ಗದ ಸಹಾಯಧನವನ್ನು ₹2 ಲಕ್ಷಕ್ಕೆ ಹಾಗೂ ಎಸ್‌ಸಿ/ಎಸ್‌ಟಿ ಫಲಾನುಭವಿಗಳಿಗೆ ₹3 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಮಾಜಿ ಸೈನಿಕರು, ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ದುರ್ಬಲ ವರ್ಗದವರಿಗೆ ವಿಶೇಷ ಆದ್ಯತೆ ಮತ್ತು ಮೀಸಲಾತಿ ಕಲ್ಪಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಇದೇ ವೇಳೆ ಸಿಎಂ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಲು ಅಹವಾಲುಗಳನ್ನು ಕೂಡ ಸ್ವೀಕರಿಸಿದರು.

Tags:

error: Content is protected !!