ವಿಜಯಪುರ ನಗರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತೋತ್ಸವ ಹಾಗೂ ವಿಜಯೋತ್ಸವವನ್ನು ಇಂದು ಅದ್ಧೂರಿಯಾಗಿ ಆಚರಿಸಲಾಯಿತು. ಕರ್ನಾಟಕ ರಾಜ್ಯ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸಮಾಜಗಳ ಮುಖಂಡರು, ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.


ಚೆನ್ನಮ್ಮ ವೃತ್ತದಿಂದ ಆರಂಭಗೊಂಡ ಬೃಹತ್ ಮೆರವಣಿಗೆಯಲ್ಲಿ ಮಹಿಳೆಯರ ಬೈಕ್ ರ್ಯಾಲಿ ಹಾಗೂ 10 ಓಪನ್ ಜೀಪ್ಗಳು ಪ್ರಮುಖ ಆಕರ್ಷಣೆಯಾಗಿದ್ದವು. ಮಹಿಳೆ ಯರು ಬೈಕ್ಗಳಲ್ಲಿ ಸಂಚರಿಸುವ ಮೂಲಕ ಚೆನ್ನಮ್ಮ ಅವರ ಧೈರ್ಯ, ಸಾಹಸ ಮತ್ತು ಹೋರಾಟದ ಸಂದೇಶ ಸಾರಿದರು. ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಮೆರವಣಿಗೆ ಸಂಚರಿಸಿ ಮುಖ್ಯ ಕಾರ್ಯಕ್ರಮದ ಸ್ಥಳದಲ್ಲಿ ಸಮಾವೇಶಗೊಂಡಿತು. ವಿವಿಧ ಸಮಾಜಗಳ ಜನರು ಒಗ್ಗೂಡಿ ವಿಜಯೋತ್ಸವದಲ್ಲಿ ಭಾಗವಹಿಸುವ ಮೂಲಕ ಸಾಮಾಜಿಕ ಐಕ್ಯತೆಯ ಸಂದೇಶ ನೀಡಿದರು. ಕಿತ್ತೂರು ರಾಣಿ ಚೆನ್ನಮ್ಮ ಅವರ ದೇಶಪ್ರೇಮ, ಬ್ರಿಟಿಷರ ವಿರುದ್ಧದ ಹೋರಾಟ ಹಾಗೂ ತ್ಯಾಗವನ್ನು ಸ್ಮರಿಸಿ ಗೌರವ ಸಲ್ಲಿಸಲಾಯಿತು.
