Belagavi

ಉತ್ತರ ವಲಯದ ಹಿರಿಯ ಅಧಿಕಾರಿಗಳೊಂದಿಗೆ ಎಡಿಜಿಪಿ ವಿಜಯ್ ಕುಮಾರ್ ಸಿಂಗ್ ಮಹತ್ವದ ಸಭೆ!

Share

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಇದರ ಭಾಗವಾಗಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ವಿಜಯ್ ಕುಮಾರ್ ಸಿಂಗ್ ಅವರು ಬೆಳಗಾವಿಗೆ ಭೇಟಿ ನೀಡಿ, ಉತ್ತರ ವಲಯದ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ವಿಜಯ್ ಕುಮಾರ್ ಸಿಂಗ್ ಅವರು ಬೆಳಗಾವಿಗೆ ಭೇಟಿ ನೀಡಿ, ಉತ್ತರ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಈ ಮಹತ್ವದ ಸಭೆಯಲ್ಲಿ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್, ಬೆಳಗಾವಿ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಹಾಗೂ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರು ಉಪಸ್ಥಿತರಿದ್ದರು.

ಅಲ್ಲದೆ, ಗದಗ, ಬಾಗಲಕೋಟೆ, ಹಾವೇರಿ, ವಿಜಯಪುರ ಹಾಗೂ ಧಾರವಾಡ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಸಹ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ವಲಯ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ನಿಯಂತ್ರಣ, ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ ಎಡಿಜಿಪಿ ವಿಜಯ್ ಕುಮಾರ್ ಸಿಂಗ್ ಅವರು, ಅಧಿಕಾರಿಗಳಿಗೆ ಅಗತ್ಯ ಸಲಹೆ ಮತ್ತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

Tags:

error: Content is protected !!