VIJAYNAGAR

ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದರೇ ಉಗ್ರ ಹೋರಾಟ

Share

ಬೆಳಗಾವಿ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಗಳನ್ನು ವಾಪಸ್ ಪಡೆಯುವ ಸಾಧ್ಯತೆ ಹಿನ್ನೆಲೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಇದರ ಬೆನ್ನಲ್ಲೇ ಶ್ರೀರಾಮ ಸೇನೆ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದೆ.

ಹೊಸಪೇಟೆಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಸರ್ಕಾರ ವಾಪಸ್ ಪಡೆಯಬಾರದು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಈ ಕಾಯ್ದೆಗಳನ್ನು ವಾಪಸ್ ಪಡೆದರೆ ಶ್ರೀರಾಮ ಸೇನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರಾಜ್ಯ ಸರ್ಕಾರ ನಿರಂತರವಾಗಿ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಮುತಾಲಿಕ್, ಕ್ರಿಸ್‌ಮಸ್ ಸಂದರ್ಭದಲ್ಲಿ ಕ್ರಿಶ್ಚಿಯನ್ ಶಾಲೆಗಳಿಗೆ ನೀಡುವ 10 ದಿನಗಳ ರಜೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಕ್ರಿಶ್ಚಿಯನ್ ಮಿಷನರಿಗಳಿಗೆ ಮತಾಂತರವೇ ಮೂಲ ಉದ್ದೇಶವಾಗಿದ್ದು, ಸರ್ಕಾರ ಈ ವಿಚಾರದಲ್ಲಿ ಹಿಂದೆ ಸರಿಯಬೇಕು ಎಂದರು. ಅಲ್ಲದೆ, ಹೊಸಪೇಟೆಯ ಸುಬೇದಾರ್ ಬಾವಿಯನ್ನು ವಕ್ಫ್ ಬೋರ್ಡ್‌ಗೆ ವರ್ಗಾವಣೆ ಮಾಡಿರುವ ಕ್ರಮಕ್ಕೂ ತೀವ್ರ ಆಕ್ರೋಶ ಹೊರಹಾಕಿದರು.

Tags:

error: Content is protected !!