Vijaypura

ಪ್ರಾಣದ ಹಂಗು ತೊರೆದು ಬಸ್ ಬಾಗಿಲಿನಲ್ಲಿ ನೇತಾಡುತ್ತಾ ಪ್ರಯಾಣಿಸುವ ವಿದ್ಯಾರ್ಥಿಗಳು!

Share

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಬಸ್‌ನಲ್ಲಿ ಪ್ರಯಾಣಿಸುವಂತಹ ಅಪಾಯಕಾರಿ ಘಟನೆ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಿಂದ ಬೈಲಕೂರ ಗ್ರಾಮಕ್ಕೆ ತೆರಳುವ ಬಸ್‌ನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಬಸ್‌ನಲ್ಲಿ ಕುಳಿತುಕೊಳ್ಳಲು ಮಾತ್ರವಲ್ಲ, ನಿಂತುಕೊಳ್ಳಲೂ ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಬಸ್‌ನ ಬಾಗಿಲಲ್ಲೇ ನಿಂತುಕೊಂಡು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸುತ್ತಿದ್ದಾರೆ. ಚಲಿಸುತ್ತಿರುವ ಬಸ್‌ನ ಬಾಗಿಲಿನಲ್ಲಿ ನಿಂತು ಪ್ರಯಾಣಿಸುವ ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರೂ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿದೆ. ವಿದ್ಯಾರ್ಥಿಗಳ ಜೀವಕ್ಕೆ ಅಪಾಯ ಎದುರಾಗಿದ್ದರೂ ಸಂಬಂಧಪಟ್ಟ ಸಾರಿಗೆ ಇಲಾಖೆ ಈ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಬೇಕಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುದ್ದೇಬಿಹಾಳ-ಬೈಲಕೂರ ಮಾರ್ಗದಲ್ಲಿ ಹೆಚ್ಚುವರಿ ಬಸ್‌ಗಳನ್ನು ಓಡಿಸಬೇಕು. ಸಂಭವನೀಯ ಅಪಘಾತಗಳನ್ನು ತಪ್ಪಿಸಲು ಸಾರಿಗೆ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tags:

error: Content is protected !!