ವಿಜಯಪುರ ನಗರದ ಭೂತನಾಳ ಕೆರೆಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಿಜಯಪುರ ನಗರಕ್ಕೆ ನೀರು ಸರಬರಾಜು ಮಾಡುವ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇನ್ಮುಂದೆ ನಗರದ ಎಲ್ಲಾ 35 ವಾರ್ಡ್ಗಳಿಗೆ ಸುಮಾರು ಎಂಟು ದಿನಗಳ ಅಂತರದಲ್ಲಿ ಕುಡಿಯುವ ನೀರು ಪೂರೈಸಲು ಕರ್ನಾಟಕ ಜಲಮಂಡಳಿ ಹಾಗೂ ಮಹಾನಗರ ಪಾಲಿಕೆ ನಿರ್ಧರಿಸಿವೆ.
ಭೂತನಾಳ ಕೆರೆಯ ನೀರಿನ ಮೇಲೆ ಅವಲಂಬಿತ ಪ್ರದೇಶಗಳಿಗೆ ಕೋಲಾರ ಕೃಷ್ಣಾ ನದಿಯಿಂದ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿದೆ. ಆದರೆ ನೀರಿನ ಲಭ್ಯತೆ ಕಡಿಮೆ ಯಾಗಿರುವುದರಿಂದ ಈ ಹಿಂದೆ ನಿಗದಿಪಡಿಸಿದ್ದ ನೀರು ಪೂರೈಕೆಯ ದಿನಗಳ ಅಂತರ ಹೆಚ್ಚಾಗಲಿದೆ. ಮಳೆಗಾಲ ಆರಂಭ ವಾಗುವವರೆಗೂ ಎಂಟು ದಿನಗಳಿಗೊಮ್ಮೆ ನೀರು ಪೂರೈಸಲಾಗುವುದು ಎಂದು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು ಭೂತನಾಳ ಕೆರೆಯ ನೀರಿನ ಮೇಲೆ ಅವಲಂಬಿತ ಪ್ರದೇಶಗಳಿಗೆ ಕೋಲಾರ ಕೃಷ್ಣಾ ನದಿಯಿಂದ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿದೆ. ಆದರೆ ನೀರಿನ ಲಭ್ಯತೆ ಕಡಿಮೆಯಾಗಿರುವುದರಿಂದ ಈ ಹಿಂದೆ ನಿಗದಿಪಡಿಸಿದ್ದ ನೀರು ಪೂರೈಕೆಯ ದಿನಗಳ ಅಂತರ ಹೆಚ್ಚಾಗಲಿದೆ. ಮಳೆಗಾಲ ಆರಂಭವಾಗುವವರೆಗೂ ಎಂಟು ದಿನಗಳಿಗೊಮ್ಮೆ ನೀರು ಪೂರೈಸಲಾಗುವುದು ಎಂದು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.ಸಾರ್ವಜನಿಕರು ಕುಡಿಯುವ ನೀರನ್ನು ವಾಹನ ತೊಳೆಯಲು, ಗಿಡಗಳಿಗೆ ನೀರು ಹಾಕಲು, ರಸ್ತೆ ತೊಳೆಯಲು ಹಾಗೂ ಅನಗತ್ಯವಾಗಿ ಚರಂಡಿಗೆ ಹರಿಬಿಡಲು ಬಳಸಬಾರದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಯಾವುದೇ ಮುನ್ಸೂಚನೆ ನೀಡದೆ ನೀರಿನ ಸಂಪರ್ಕ ಕಡಿತಗೊಳಿಸುವುದರ ಜೊತೆಗೆ ಸೂಕ್ತ ದಂಡ ವಿಧಿಸ ಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
