ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಘೋಷಣೆಯಾಗಿದ್ದು, ಹಂತಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಜೀವಾವಧಿ ಶಿಕ್ಷೆ ಹಾಗೂ 45 ಸಾವಿರ ದಂಡ ವಿಧಿಸಿ ನ್ಯಾಯಾಧೀಶೆ ಪಲ್ಲವಿ ಬಿ ಆರ್ ಅವರು ಆದೇಶ ಹೊರಡಿಸಿದ್ದಾರೆ. ಹೌದು.. ಕೊಲೆ ಅಪರಾಧಿ ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್ ಗೆ ಜೀವಾವಧಿ ಶಿಕ್ಷೆ ಘೋಷಣೆ ಮಾಡಿದ್ದು, 2024 ರ ಮೇ 15 ರಂದು ನಡೆದಿದ್ದ ಕೊಲೆ ಪ್ರಕರಣದಲ್ಲಿ ಹುಬ್ಬಳ್ಳಿಯ ವೀರಾಪುರ ಓಣಿಯ 20 ವರ್ಷದ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಮಾಡಿದ್ದ ಹಂತಕನಿಗೆ ಈಗ ಜೈಲೇ ಗತಿ ಎಂಬುವಂತಾಗಿದೆ.
ಮನೆಯಲ್ಲಿ ಮಲಗಿದ್ದವಳನ್ನು ಎಬ್ಬಿಸಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ. 494 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಇಂದು ತೀರ್ಪು ಹೊರಬಿದ್ದಿದೆ.
