Dharwad

ಧಾರವಾಡ ವಿದ್ಯಾಗಿರಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 6 ಲಕ್ಷ ಮೌಲ್ಯದ ಚಿನ್ನ, ನಗದು ಸಹಿತ ಮನೆಗಳ್ಳನ ಬಂಧನ

Share

ಕಳೆದ ನವೆಂಬರ್ 19ರಂದು ಧಾರವಾಡದ ಸಂಗೊಳ್ಳಿ ರಾಯಣ್ಣ ನಗರದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಳ್ಳನನ್ನು ಬಂಧಿಸುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಧಾರವಾಡದ ಸಂಗೊಳ್ಳಿ ರಾಯಣ್ಣ ನಗರದ ಮೌನೇಶ್ವರ ಹಂಜಗಿ ಎಂಬುವವರು ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗಿದ್ದ ವೇಳೆ ಹಿಂಬಾಗಿಲ ಬೀಗ ಮುರಿದು ಕಳ್ಳತನ ಮಾಡಲಾಗಿತ್ತು. ಈ ಕುರಿತು ಮೌನೇಶ್ವರ ಅವರು ವಿದ್ಯಾಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು ಕೆಲವೇ ದಿನಗಳಲ್ಲಿ ಮನೆಗಳ್ಳನ ಹೆಡೆಮುರಿ ಕಟ್ಟಿದ್ದಾರೆ. ಹರೀಶ ಪಾತ್ರೋಟಿ (28) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 6 ಲಕ್ಷ ರೂಪಾಯಿ ಮೌಲ್ಯದ 55 ಗ್ರಾಂ ಬಂಗಾರ ಹಾಗೂ 16 ಸಾವಿರ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಲಾಗಿದೆ. ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಂಬಿ ಹಿಂದೆ ತಳ್ಳಿದ್ದಾರೆ.

Tags:

error: Content is protected !!