Belagavi

ವಿದ್ಯಾ ದೇಗುಲದಲ್ಲೇ ಕಾಮುಕನ ಅಟ್ಟಹಾಸ; ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ ಆರೋಪ!

Share

 

ಅಥಣಿ: ಮಕ್ಕಳಿಗೆ ವಿದ್ಯೆ, ಸಂಸ್ಕಾರ ಹಾಗೂ ಸುರಕ್ಷತೆಯ ಪಾಠ ಕಲಿಸಬೇಕಾದ ಸರ್ಕಾರಿ ಶಾಲೆಯ ಆವರಣವೇ ಅಮಾನವೀಯ ಕೃತ್ಯವೊಂದಕ್ಕೆ ಸಾಕ್ಷಿಯಾಗಿದೆಯೇ? ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿರುವ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನವೆಂಬರ್ 24ರಂದು ಸಂಜೆ ಸುಮಾರು 6.30ರ ವೇಳೆಗೆ ಸರ್ಕಾರಿ ಶಾಲೆಯಲ್ಲಿ ಈ ಹೀನ ಕೃತ್ಯ ನಡೆದಿದೆ ಎನ್ನಲಾಗಿದೆ. ನಿಂಗಪ್ಪ ರಾಮಚಂದ್ರ ಕೊಳೆಕರ (38) ಎಂಬಾತನ ವಿರುದ್ಧ ಯುವತಿಯ ತಂದೆ ಅಥಣಿ ಪೊಲೀಸ್ ಠಾಣೆಗೆ ಖುದ್ದಾಗಿ ಆಗಮಿಸಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣದ ಕುರಿತು ಮಾಹಿತಿ ಪಡೆದು ತನಿಖೆಯ ಪ್ರಗತಿ ಪರಿಶೀಲಿಸಿದ್ದಾರೆ.

ವಿದ್ಯೆ ಕಲಿಯಬೇಕಾದ ದೇಗುಲದಲ್ಲಿ ಇಂತಹ ಕೃತ್ಯ ನಡೆದಿರುವ ಆರೋಪ ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ವಿಶೇಷ ಚೇತನ ಯುವತಿಯ ಸುರಕ್ಷತೆಯನ್ನೇ ಪ್ರಶ್ನಿಸುವ ಈ ಘಟನೆ, ಮಹಿಳೆಯರ ರಕ್ಷಣೆ ಹಾಗೂ ಸಾರ್ವಜನಿಕ ಸ್ಥಳಗಳ ಭದ್ರತೆಯ ಬಗ್ಗೆ ಮತ್ತೊಮ್ಮೆ ಆತಂಕ ಮೂಡಿಸಿದೆ. ಆರೋಪ ಸಾಬೀತಾದರೆ ತಪ್ಪಿತಸ್ಥನಿಗೆ ಕಾನೂನಿನಡಿ ಕಠಿಣ ಶಿಕ್ಷೆಯಾಗಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ

Tags:

error: Content is protected !!