ಕನಕಪುರದ ಆರ್‌ಇಎಸ್ ಆವರಣದಲ್ಲಿ ಆಯೋಜಿಸಿರುವ ಕೃಷಿ ಮೇಳ 2026ಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಶನಿವಾರ ಚಾಲನೆ ನೀಡಿದ್ದಾರೆ. ಸ್ಥಳೀಯ ಯುವಕರಿಗೆ ತಮ್ಮ ಊರಿನಲ್ಲೇ ಉದ್ಯೋಗ ನೀಡಿ ವಲಸೆ ತಪ್ಪಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಕೃಷಿ ಮೇಳಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಕೌಶಲ್ಯಾಭಿವೃದ್ಧಿ ಸಂಬಂಧ ಅನೇಕ ಖಾಸಗಿ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿದ್ದು, ಸಾತನೂರಿನಲ್ಲೂ ಎಲ್ಲಾ ಚಟುವಟಿಕೆಗಳು ನಡೆಯಲಿವೆ ಎಂದು ಹೇಳಿದರು. ಕನಕಪುರದ ಯುವಕರಿಗೆ ಉದ್ಯೋಗ ಸಿಗಬೇಕು ಎಂಬ ಉದ್ದೇಶದಿಂದ ಕ್ರಮ ಕೈಗೊಂಡಿದ್ದು, ಜಪಾನ್‌ಗೆ ತೆರಳಿದ್ದಾಗ 600 ಮಂದಿಗೆ ಉದ್ಯೋಗ ನೀಡುವ ಜೊತೆಗೆ 600 ಜನರ ಸಾಮರ್ಥ್ಯದ ಫ್ಯಾಕ್ಟರಿಯನ್ನೂ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು. ಸ್ಥಳೀಯರು ತಮ್ಮ ಊರಿನಲ್ಲೇ ಫ್ಯಾಕ್ಟರಿಗೆ ಹೋಗಿ ಕೆಲಸ ಮಾಡಿಕೊಂಡು ಬದುಕಬೇಕು ಮತ್ತು ಹೊರಗೆ ವಲಸೆ ಹೋಗುವುದನ್ನು ತಪ್ಪಿಸಬೇಕು ಎಂಬುದು ತಮ್ಮ ಆಶೆಯಾಗಿದ್ದು, ಈ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ, ಸಂಜೆ ಅಂತಿಮ ಸಭೆಗೆ ತೆರಳುತ್ತಿರುವುದಾಗಿ ಸಿಎಂ ಹೇಳಿದರು.


ಈ ಕಾರ್ಯಕ್ರಮದಲ್ಲಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಎಂಎಲ್‌ಸಿ ರವಿ, ಸುಧಾಮ್ ದಾಸ್, ರೂರಲ್ ಎಜುಕೇಷನ್ ಸೊಸೈಟಿ (ಆರ್‌ಇಎಸ್) ಅಧ್ಯಕ್ಷ ಡಾ. ಎಚ್.ಕೆ. ಶ್ರೀಕಂಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.
