ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಕನ್ನಡ ಧ್ವಜವನ್ನು ಹಾರಿಸಿದ್ದ ದಿಟ್ಟ ಹೋರಾಟಗಾರ ಶ್ರೀನಿವಾಸ್ ತಾಳೂಕರ್ ಅವರಿಗೆ ಸೇರಿದ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ.
: ಹೌದು ಬೆಳಗಾವಿಯ ವಡಗಾವಿಯಲ್ಲಿರುವ ಕನ್ನಡ ಹೋರಾಟಗಾರ ಶ್ರೀನಿವಾಸ್ ತಾಳೂಕರ್ ಅವರ ಝರಾಕ್ಸ್ ಅಂಗಡಿಗೆ ಗುರುವಾರ ತಡರಾತ್ರಿ 2.30ರ ಸುಮಾರಿಗೆ ಕಿಡಿಗೇಡಿಗಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ತಕ್ಷಣ ನೋಡಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಶಹಾಪುರ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಾಲಿಕೆ ಮುಂಭಾಗದಲ್ಲಿ ಕನ್ನಡ ಧ್ವಜವನ್ನು ಹಾರಿಸುವ ಮೂಲಕ ಕನ್ನಡಿಗರ ಬಹುದಿನಗಳ ಕನಸು ನನಸು ಮಾಡಿದ್ದಕ್ಕೆ ಈ ರೀತಿ ಕಿಡಿಗೇಡಿಗಳು ಅವರ ಅಂಗಡಿಗೆ ಬೆಂಕಿ ಹಚ್ಚಿರುವುದಾಗಿ ತಿಳಿದು ಬಂದಿದೆ. ತಕ್ಷಣವೇ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರ ಶ್ರೀನಿವಾಸ್ ತಾಳೂಕರ್ ಆಗ್ರಹಿಸಿದ್ದಾರೆ.