ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶನಿವಾರ ಸುವರ್ಣಸೌಧದ ಮೂರನೇ ಮಹಡಿಯಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಯಾ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ ಬಗ್ಗೆ ಅಧಿಕಾರಿಗಳಿಂದ ದುರ್ಯೋಧನ ಐಹೊಳೆ ಮಾಹಿತಿ ಪಡೆದುಕೊಂಡು, ಪರಿಶಿಷ್ಟ ಜಾತಿಯ ಜನರಿಗೆ ಸಿಗುವ ಸೌಲಭ್ಯಗಳನ್ನು ತ್ವರಿತವಾಗಿ ಮುಟ್ಟಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಾದ ನಂತರ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಮಂಜೂರಾದ ವಾಹನಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ್, ಕೇಂದ್ರ ಕಚೇರಿ ಪ್ರಧಾನ ವ್ಯವಸ್ಥಾಪಕರಾದ ಎಸ್.ಎಮ್.ಕವಿತಾ, ಬೆಳಗಾವಿ ವಿಭಾಗದ ಉಪಪ್ರಧಾನ ವ್ಯವಸ್ಥಾಪಕರಾದ ಪಿ.ಶೋಭಾ, ಜಿಲ್ಲಾ ವ್ಯವಸ್ಥಾಪಕ ಬಸವರಾಜ್ ಚನ್ನಯ್ಯನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.