ಸಕ್ಕರೆ ಪ್ರಮಾಣ ಕಡಿಮೆಯಾಗಿ ತೀವ್ರ ಅಸ್ವಸ್ಥಗೊಂಡಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಚಿತ್ರದುರ್ಗದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮರಳಿ ಬರುವಾಗ ಸದಾನಂದಗೌಡ ಅಸ್ವಸ್ಥಗೊಂಡರು ಎಂದು ಮಾಹಿತಿ ಲಭ್ಯವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.