ಬೆಳಗಾವಿಯ ಉತ್ತರದ ಶಾಸಕ ಅನೀಲ ಬೆಣಕೆ ಅವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜನರಿಗೆ ತೊಂದರೆಯಾಗದAತೆ ಅಭಿವೃದ್ಧಿ ಕಾರ್ಯಗಳನ್ನ ಮಾಡಬೇಕೆಂದು, ಅಧಿಕಾರಿಗಳಿಗೆ ತಾಖೀತು ಮಾಡಿದರು.
ಸುಮಾರು ೨ ವಾರದ ಹಿಂದೆ ಸೋಶಲ್ ಮೀಡಿಯಾ ಮುಖಾಂತರ ಜನರ ದೂರು ಆಲಿಸಿದ್ಧರು. ಇಂದು ಈ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕರೆಯಲಾಗಿದ್ದ ಸಭೆಯಲ್ಲಿ, ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸಮಸ್ಯೆಯನ್ನ ಬಗೆಹರಿಸುವ ಪ್ರಯತ್ನ ಮಾಡಿದರು. ಕುಡಿಯುವ ನೀರು, ಬೀದಿದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಸಂಬ0ಧಿಸಿದ0ತೆ ಅನೇಕ ದೂರುಗಳು ಸ್ವೀಕೃತಿಯಾಗಿವೆ.
ಬೆಳಗಾವಿ ಮಹಾನಗರದಲ್ಲಿ ಸ್ಮಾರ್ಟಸಿಟಿ ಯೋಜನೆಯಲ್ಲಿ ಅನೇಕ ಕಾಮಗಾರಿಗಳನ್ನ ಕೈಗೆತ್ತಿಕೊಳ್ಳಲಾಗಿದೆ. ಆದರೇ ಕಾಮಗಾರಿಗಳು ಸರಿಯಾಗಿ ನಡೆಯುತ್ತಿಲ್ಲ. ಯುಜಿಡಿ, ಸೇರಿದಂತೆ ಇನ್ನುಳಿದ ಕಾಮಗಾರಿಗಳನ್ನ ಸರಿಯಾಗಿ ನಡೆಸಬೇಕೆಂದರು. ಇನ್ನು ಆಂಜನೇಯ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯ ವೇಳೆ ರಸ್ತೆಗೆ ಹಾನಿವುಂಟಾಗಿದ್ದು, ಇದನ್ನ ಪ್ರಶ್ನಿಸಿ ಶಾಸಕರು ಅಧಿಕಾರಿಗಳ ವಿರುದ್ಧ ಗರಂ ಆದ್ರು.
ಈ ವೇಳೆ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ಧರು.