ನಾನು ಮಧ್ಯ ಕರ್ನಾಟಕ ಭಾಗದ ಹೊನ್ನಾಳಿಯವನು. ಉತ್ತರ ಕರ್ನಾಟಕವನ್ನು ಗೌರವಿಸುತ್ತೇನೆ. ಆದರೆ ಹೊನ್ನಾಳಿಯ ಅಂಜದ ಗಂಡು ಎಂದು ಹೆಸರು ಹೇಳದೇ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಶಾಸಕ ಯತ್ನಾಳಗೆ ತಿರುಗೇಟು ನೀಡಿದ್ದಾರೆ.
ನಾನು ಯಾವುದಕ್ಕೂ ಅಂಜುವ ಮಗ ಅಲ್ಲ. ನಾನು ಉತ್ತರ ಕರ್ನಾಟಕದವನು. ಅಭಿವೃದ್ಧಿ ಪರ ನನ್ನ ಧ್ವನಿ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ವಿನಾ ಕಾರಣ ಪಕ್ಷ, ನಾಯಕರ ಬಗ್ಗೆ ಮಾತನಾಡಬಾರದು. ಪಕ್ಷ ತಾಯಿ ಸಮಾನ. ನಾನು ತಾಯಿಯನ್ನು ಗೌರವಿಸುತ್ತೇನೆ. ಯಡಿಯೂರಪ್ಪ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ.
ಹೋರಾಟದಿಂದಲೇ ಬಂದು ಈಗ ಮುಖ್ಯಮಂತ್ರಿ ಆಗಿದ್ದಾರೆ. ಹಾಗೆಂದು ಯಡಿಯೂರಪ್ಪ ಪರವಾಗಿಯೂ ಬ್ಯಾಟಿಂಗ್ ಮಾಡುತ್ತಿಲ್ಲ. ಯಡಿಯೂರಪ್ಪ ಅವರನ್ನು ಸಮರ್ಥನೆ ಮಾಡಿಕೊಳ್ಳದೆ ಕುಮಾರಸ್ವಾಮಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ? ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ. ನಾನು ಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ದೇನೆ.
ಯಾರಿಗೂ ಹೆದರುವವನು ಅಲ್ಲ. ಯಾರನ್ನೂ ಹೆದರಿಸಿಲ್ಲ. ಹೊನ್ನಾಳಿಯ ಹೊಡೆತ ಇಡೀ ರಾಜ್ಯಕ್ಕೆ ಗೊತ್ತು. ವರ್ಷಕ್ಕೆ ಎರಡು ಬಾರಿ ಕುಸ್ತಿ ನಡೆಯುತ್ತದೆ. ಅದೂ ದೊಡ್ಡಮಟ್ಟದಲ್ಲಿ ನಡೆಯುತ್ತದೆ ಎಂದು ಹೇಳಿದರು.