ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಆಫ್ ಲೈನ್ ತರಗತಿಯನ್ನು ಸಂಕ್ರಾಂತಿ ಬಳಿಕ ಆರಂಭಿಸಲಾಗುವುದು ಎಂದು ಉಪಮುಖ್ಯಮತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಉಪಮುಖ್ಯಮತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ತರಗತಿಗಳ್ನು ಆಫ್ಲೈನ್ ವಿಧಾನದಲ್ಲಿ ಆರಂಭಿಸಲು ವಿಶ್ವವಿದ್ಯಾಲಯ ಕುಲಪತಿಗಳ ಜೊತೆ ಚರ್ಚೆ ನಡೆಸಲಾಗಿದೆ. ಶೀಘ್ರವೇ ಆಫ್ಲೈನ್ ತರಗತಿಗಳು ಆರಂಭವಾಗುವ ದಿನ ಪ್ರಕಟಿಸುತ್ತೇವೆ ಎಂದು ತಿಳಿಸಿದರು.