Bailahongala

ಸರಕಾರದ ಯೋಜನೆ ರೂಪಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ..ಮಾಜಿ ಶಾಸಕ ಸಂಜಯ್ ಪಾಟೀಲ್

Share

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದು ಎರಡು ಸರಕಾರಗಳು ಗ್ರಾಮ ಪಂಚಾಯತಿಗಳಿಗೆ ನೀಡುವ ಅನುದಾನ ಪಡೆದು ಸಮಗ್ರ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ನೂತನ ಗ್ರಾ.ಪಂ. ಸದಸ್ಯರಿಗೆ ಕರೆ ನೀಡಿದರು.

ಬೈಲಹೊಂಗಲ ಪಟ್ಟಣದ ಗಣಾಚಾರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿದ ತಾಲೂಕಿನ ನೂತನ ಗ್ರಾ.ಪಂ. ಸದಸ್ಯರ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ತಾಲೂಕಿನ ನೂತನ ಗ್ರಾ.ಪಂ.ಸದಸ್ಯರಿಗೆ ಸತ್ಕರಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ಸರಕಾರ ಗ್ರಾಮಗಳ ಅಭಿವೃದ್ಧಿಗೆ ಗ್ರಾ.ಪಂಗೆ ಹೆಚ್ಚಿನ ಅನುದಾನ ನೀಡಿದೆ. ಈ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳನ್ನು ಅನುಷ್ಠಾನಗೊಳಿಸಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಗಟಾರ, ಶೌಚಾಲಯ, ದೀಪಗಳ ವ್ಯವಸ್ಥೆ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕೆಂದು ನುಡಿದರು. ಜಿಲ್ಲೆಯಲ್ಲಿ ಹೆಚ್ಚು ಜನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಪಂಚಾಯತ ರಾಜ್ಯ ವ್ಯವಸ್ಥೆಯನ್ನು ಗಮನದಲ್ಲಿಟ್ಟು ಹೆಚ್ಚಿನ ಜವಾಬ್ದಾರಿಯಿಂದ ಗ್ರಾಮದ ಸರ್ವಾಂಗೀನ ಅಭಿವೃದ್ಧಿಗಳ ಕೆಲಸ ಮಾಡಿ ಗಾಂಧೀಜಿಯವರ ಕನಸು ನನಸು ಮಾಡಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಡಾ ಅಧ್ಯಕ್ಷ ಡಾ.ವಿಶ್ವನಾಥ್ ಪಾಟೀಲ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್‍ನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ, ಜಿ.ಪಂ. ಸದಸ್ಯ ಈರಣ್ಣ ಕರಿಕಟ್ಟಿ, ಸವದತ್ತಿ ತಾ.ಪಂ. ಅಧ್ಯಕ್ಷ ವಿನಯಕುಮಾರ ದೇಸಾಯಿ, ಬೈಲಹೊಂಗಲ ತಾ.ಪಂ ಅಧ್ಯಕ್ಷೆ ಪಾರ್ವತಿ ನರೇಂದ್ರ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ರತ್ನಕ್ಕಾ ಗೌರಿ ಸೇರಿದಂತೆ ಹಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

 

 

 

Tags:

error: Content is protected !!